ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಜಿಲ್ಲೆಯ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಖಂಡನೀಯ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ), ಬೆಂಗಳೂರು ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಬಿತ್ತನೆ, ಬೆಳೆ ಬೆಳವಣಿಗೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ, ಉಳಿದ ತಾಲೂಕುಗಳನ್ನು ನಿರ್ಲಕ್ಷಿಸಿರುವುದು ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಮಳೆ ಕೊರತೆ, ಬೆಳೆ ಹಾನಿ, ಅಂತರ್ಜಲ ಮಟ್ಟ ಹಾಗೂ ರೈತರ ವಾಸ್ತವ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹವಾಗಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಅಪ್ಪುರಾಜ್ ನಿಮಾದಾರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

