ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜಲನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್(ಐಸಿಎಸ್ಈ) ಶಾಲೆಯಲ್ಲಿ
ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೆಕರ, ಮೇಜರ್ ಧ್ಯಾನ ಚಂದ ಅವರು ಪ್ರಸಿದ್ಧ ಹಾಕಿ ಆಟಗಾರರಾಗಿದ್ದರು. ಅವರ ಗೌರವಾರ್ಥವಾಗಿ ಭಾರತದಲ್ಲಿ ಆಗಸ್ಟ್ 29 ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಎಲ್ಲರೂ ಅವರಿಂದ ಸ್ಪೂರ್ತಿ ಪಡೆದು ಎಲ್ಲರೂ ಕ್ರೀಡೆಗಳಲ್ಲಿ ತಮ್ಮ ಛಾಪು ಮೂಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಂಯೋಜಕಿ ಜಯಾ ಗಲಗಲಿ, ದೈಹಿಕ ಶಿಕ್ಷಕ ಕಿರಣ ಮುಳ್ಳೂರ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

