Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
(ರಾಜ್ಯ ) ಜಿಲ್ಲೆ

ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಂಚೋಳಿ ಅಂಗನವಾಡಿಯಲ್ಲಿ ಅಧಿಕಾರಿಗಳ ‘ಕಮಿಷನ್’ ಲೀಲೆ! | ಗ್ರಾಮಸ್ಥರ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ವಿಶೇಷ ವರದಿ
ಅಫ್ಜಲಪುರ: “ಸೋರುತ್ತಿಹದು ಮನೆಯ ಮಾಳಿಗೆ ಅಜ್ಞಾನದಿಂದ..” ಶಿಶುನಾಳ ಶರೀಫರ ಈ ಮಾತು ಅಫ್ಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಅಂಗನವಾಡಿ ಕೇಂದ್ರಗಳ ಪ್ರಸ್ತುತ ಸ್ಥಿತಿಗೆ ಕನ್ನಡಿ ಹಿಡಿದಂತಿದೆ. ತಲೆಯ ಮೇಲಿನ ಸೂರು ಕುಸಿದು ಬೀಳುವ ಅಪಾಯದಲ್ಲಿದ್ದರೂ, ಅದನ್ನು ದುರಸ್ತಿ ಮಾಡದ ಅಧಿಕಾರಿಗಳು ಮಾತ್ರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಾಂಪೌಂಡ್ ಗೋಡೆ ನಿರ್ಮಿಸಲು ಹೊರಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಉದುರುತ್ತಿದೆ ಸಿಮೆಂಟ್ ಪ್ಲಾಸ್ಟರ್, ಜೀವಭಯದಲ್ಲಿ ಮಕ್ಕಳು
ಚಿಂಚೋಳಿ ಗ್ರಾಮದ ಒಂದು ಅಂಗನವಾಡಿ ಕಟ್ಟಡದ ಛಾವಣಿಯ ಪ್ಲಾಸ್ಟರ್ ಕಿತ್ತು ಸಿಮೆಂಟ್ ಚೂರುಗಳು ನೆಲಕ್ಕೆ ಉದುರುತ್ತಿವೆ. ಪಕ್ಕದಲ್ಲೇ ಇರುವ ಮತ್ತೊಂದು ಹಳೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಬಳಕೆಗೆ ಯೋಗ್ಯವಾಗಿಲ್ಲ. ಶಿಥಿಲ ಕಟ್ಟಡ ಅಪಾಯಕಾರಿಯಾದ ಕಾರಣ ಅಂಗನವಾಡಿಯನ್ನು ಅನಿವಾರ್ಯವಾಗಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ.
ಅಧಿಕಾರಿಗಳ ವಿಚಿತ್ರ ಆದ್ಯತೆ: ಕಟ್ಟಡವಿಲ್ಲದ ಜಾಗಕ್ಕೆ ಕಾಂಪೌಂಡ್!
ಮಕ್ಕಳು ಕೂರಲು ಯೋಗ್ಯವಾದ ಸೂರು ಇಲ್ಲದಿರುವಾಗ, ಶಿಥಿಲಗೊಂಡಿರುವ ಹಾಗೂ ಬಳಕೆಯಲ್ಲಿಲ್ಲದ ಕಟ್ಟಡಗಳ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸುವ ಅಗತ್ಯವೇನಿತ್ತು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಮಕ್ಕಳ ಜೀವ ರಕ್ಷಣೆಗಾಗಿ ಕಟ್ಟಡ ದುರಸ್ತಿ ಮಾಡುವುದನ್ನು ಬಿಟ್ಟು ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡುತ್ತಿರುವುದು ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸುತ್ತದೆ.
ಅನುದಾನ ಗುಳುಂ ಮಾಡಲು ಸ್ಥಳ ಬದಲಾವಣೆ ತಂತ್ರ?
ಬೇರೆ ಅಂಗನವಾಡಿ ಕೇಂದ್ರಕ್ಕೆ ಮಂಜೂರಾಗಿದ್ದ ಕಾಂಪೌಂಡ್ ಕಾಮಗಾರಿಯನ್ನು ನಿಯಮಬಾಹಿರವಾಗಿ ಇಲ್ಲಿಗೆ ಸ್ಥಳಾಂತರಿಸಿ, ಬಿಲ್ ಪಾಸ್ ಮಾಡಿಕೊಳ್ಳಲು ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಶಾಮೀಲಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೇವಲ ಹಣ ಲೂಟಿ ಮಾಡುವ ಉದ್ದೇಶದಿಂದ ಈ ‘ತಂತ್ರ’ ರೂಪಿಸಲಾಗಿದೆ ಎಂದು ಸ್ಥಳೀಯರು ನೇರವಾಗಿ ಆರೋಪಿಸುತ್ತಿದ್ದಾರೆ.
ಗ್ರಾಮಸ್ಥರು ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಕಾಮಗಾರಿಯ ತನಿಖೆ ನಡೆಸಿ, ಮಕ್ಕಳ ಹಿತದೃಷ್ಟಿಯಿಂದ ಹೊಸ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.