Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
(ರಾಜ್ಯ ) ಜಿಲ್ಲೆ

ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,‌ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅಸಮಾಧಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇವಲ ಫೋಟೋ ಶೂಟ್ ಸೀಮಿತವಾದಂತೆ ಜಿಲ್ಲಾ ಉಸ್ತುವಾರಿ ಸಚಿವರು ಬರ ವೀಕ್ಷಣೆ ಮಾಡಿದ್ದಾರೆ, ಸಭೆಗಳನ್ನು ಸಹ ಪರಿಣಾಮಕಾರಿಯಾಗಿ ನಡೆಸಿಲ್ಲ, ಒಂದರ್ಥದಲ್ಲಿ ಸರ್ಕಾರ ಬರಗಾಲ ಪರಿಸ್ಥಿತಿಯನ್ನು ಬೇಕಾಬಿಟ್ಟಿಯಾಗಿ ನಿಭಾಯಿಸುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,‌ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ
ಅಸಮಾಧಾನ ಹೊರಹಾಕಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಇಂದು ರಾಜ್ಯ ಸರ್ಕಾರ ಬೇಜವಾಬ್ದಾರಿ ಹಾಗೂ ನಿಷ್ಕಾಳಜಿತನದಿಂದ ಸರಿಯಾದ ಮಾಹಿತಿ ಸಂಗ್ರಹಿಸದೇ ಬೇಕಾಬಿಟ್ಟಿಯಾಗಿ
ಹಾಗೂ ಬರಗಾಲದ ಮಾನದಂಡಗಳನ್ನು ಸಹ ಸರಿಯಾಗಿ ಪರಿಗಣಿಸದೇ ಇಂದು ಕೇವಲ ೧೦೧ ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ ಎಂದರು.
೧೯೦ ತಾಲೂಕುಗಳಲ್ಲಿ ಮಳೆ ಕೊರತೆಯಾಗಿರುವುದನ್ನು ಸ್ವತಃ ಕಂದಾಯ ಸಚಿವರೇ ಒಪ್ಪಿದ್ದಾರೆ, ಆದರೆ ಬರಗಾಲ ಘೋಷಣೆ ಮಾತ್ರ ೧೦೧ ತಾಲೂಕುಗಳಿಗೆ ಮಾಡಿರುವುದು ನ್ಯಾಯವೇ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ೯೧ ತಾಲೂಕುಗಳು ಭೀಕರ ಪರಿಸ್ಥಿತಿ ಎದುರಿಸಿದರೂ ಕೇವಲ ೨೭ ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡಿರುವುದು
ಎಷ್ಟು ಸರಿ, ಬರಗಾಲ ಪ್ರದೇಶ ಎಲ್ಲಿದೆ ಎನ್ನುವುದು ಸರ್ಕಾರಕ್ಕೆ ಗೊತ್ತೇ ಇಲ್ಲವೇ?
ಎಂದರು.
ಮಂತ್ರಿಗಳು ಪ್ರತಿನಿಧಿಸುವ ಜಿಲ್ಲೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ, ಅವರು ಬಂದ ಸಂದರ್ಭದಲ್ಲಿ ಕೊರಳಿ ಪಟ್ಟಿ ಹಿಡಿದು ಕೇಳುತ್ತಾರೆ ಎಂಬ ಭಯದಿಂದ ತಮ್ಮ ಪ್ರದೇಶ ಬರ ಘೋಷಣೆ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರ ಬರ ವೀಕ್ಷಣೆ ಕೇವಲ ಫೋಟೋ ಶೂಟ್ ಗೆ ಸೀಮಿತವಾಗಿದೆ, ದೇವರಹಿಪ್ಪರಗಿ, ಮುದ್ದೇಬಿಹಾಳ, ಬಸವನ ಬಾಗೇವಾಡಿಗೆ ಭೇಟಿ ನೀಡಿಲ್ಲ, ಒಂದೇ ಒಂದು ಸಭೆ ನಡೆಸಿಲ್ಲ ಎಂದರು.
ಅತ್ತ ಅಧಿಕಾರಿಗಳು ಭೇಟಿ ನೀಡಿಲ್ಲ, ಈ ಎಲ್ಲ ಅಂಶಗಳಿಂದ ಬರಗಾಲ ಪರಿಸ್ಥಿತಿಯನ್ನು ಬೇಕಾಬಿಟ್ಟಿಯಾಗಿ ನಿರ್ವಹಣೆ ಮಾಡುತ್ತಿದೆ ಎಂದು ದೂರಿದರು.
ಹಳೆ ಮೈಸೂರು ಭಾಗದ ಎಲ್ಲ ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮೀಸಲಾಗಿದೆ, ಆದರೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಒಂದೇ ಒಂದು ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿಲ್ಲ ಎಂದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಸಾವಯವ ಬೀಜ ಪ್ರಮಾಣನ ನಿಗಮದ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಲರಾಜ್ ರೆಡ್ಡಿ, ಶಿಲ್ಪಾ ಕುದರಗೊಂಡ, ಮಾಧ್ಯಮ ಪ್ರಮುಖ ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕೆಲಸ

ಕೇವಲ ಮಾತೆತ್ತಿದರೆ ಸಾಕು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ನಿಯಮಾವಳಿ ಬದಲಾವಣೆ ಮಾಡಿ ಎಂದು ಕಾಂಗ್ರೆಸ್ ನಾಯಕರು ದೂರುತ್ತಾರೆ, ಈ ಹಿಂದೆ ಲೋಕಸಭೆ ಚುನಾವಣೆ ಮುಂಚೆ ರಾಜ್ಯ ಸರ್ಕಾರ ರೈತರಿಗೆ ೪೦೪೭ ಕೋಟಿ ರೂ. ಪರಿಹಾರ ನೀಡಿದ್ದು, ಅದರಲ್ಲಿ ಕೇಂದ್ರ ಸರ್ಕಾರ ನೀಡಿದ್ದು
೩೪೫೪ ಕೋಟಿ ರೂ., ಹಾಗಾದರೆ ರಾಜ್ಯ ಸರ್ಕಾರ ನೀಡಿದ್ದು ಕೇವಲ ೫೦೦ ಕೋಟಿ ರೂ. ಮಾತ್ರ ಎಂದು ನಡಹಳ್ಳಿ ದೂರಿದರು.

ಪ್ರತಿ ಎಕರೆಗೆ ೫೦ ಸಾವಿರ ರೂ. ಪರಿಹಾರ ಘೋಷಿಸಿ

ಪ್ರಥಮ ಹಂತವಾಗಿ ಪ್ರತಿ ಎಕರೆಗೆ ೨೫ ಸಾವಿರ ರೂ. ಹಾಗೂ ಎರಡನೇಯ ಹಂತದಲ್ಲಿ ೨೫ ಸಾವಿರ ರೂ. ಕೂಡಲೇ ಬಿಡುಗಡೆ ಮಾಡಬೇಕು ಎಂದು ನಡಹಳ್ಳಿ ಒತ್ತಾಯಿಸಿದರು.
ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಬೇಕಿದೆ, ಸಾಲದ ಸುಳಿಯಲ್ಲಿ ಸಿಲುಕಿ ರೈತ ಒದ್ದಾಡುತ್ತಿದ್ದಾನೆ.
ಕೇಂದ್ರದಿಂದ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ನಾವು ಸಂಪೂರ್ಣ ಸಹಕಾರ ನೀಡಲು ಸಿದ್ದ, ಮುಖ್ಯಮಂತ್ರಿಗಳು ಯಾವಾಗ ಕರೆಯುತ್ತಾರೆ ಆಗ ನಾವು ಅವರ ಜೊತೆ ನಿಯೋಗದೊಂದಿಗೆ ಹೋಗಲು ನಾವು ಸಿದ್ದ ಎಂದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.