ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ವಿಭಾಗ,ವಿಜಯಪುರ ಹಾಗೂ ಸಾಮಾಜಿಕ ಅರಣ್ಯ ವಲಯ, ಇಂಡಿ ಇವರ ಸಹಯೋಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೆಶ್ವರ ಸ್ವಾಮೀಜಿ ವೃಕ್ಷೋದ್ಯಾನದ ಲೋಕಾರ್ಪಣೆ ಸಮಾರಂಭ ಆ.೩೦ರಂದು ಭಾನುವಾರ ಬೆಳಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಅವರು ಉದ್ಘಾಟಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರು, ಸಂಸದರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
