ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ೨೦೨೬–೨೭ನೇ ಸಾಲಿನ ಎಸ್.ಎಸ್.ಎಲ್.ಸಿ ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿಶೇಷಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಶೇಷಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೧ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಶ್ರೀಮತಿ ಪ್ರತಿಭಾ (ಮೊ:೯೬೦೬೧೫೧೧೪೯), ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ತಾಲೂಕು ಪಂಚಾಯತಿಯ ರವಿ ರಾಠೋಡ (ಮೊ:೯೦೩೫೫೫೩೩೩೭), ಇಂಡಿ ತಾಲೂಕಿನ ಪರಶುರಾಮ ಭೋಸಲೆ (ಮೊ:೯೯೭೨೪೪೧೪೬೪), ಸಿಂಧಗಿ ತಾಲೂಕಿನ ಮುತ್ತುರಾಜ ಸಾತಿಹಾಳ (ಮೊ:೯೯೮೦೦೧೯೬೩೫), ಮುದ್ದೇಬಿಹಾಳ ತಾಲೂಕಿನ ಎಸ್.ಕೆ. ಘಾಟಿ (ಮೊ:೯೭೪೦೬೮೨೯೭೯) ಹಾಗೂ ಬಸವನ ಬಾಗೇವಾಡಿ ತಾಲೂಕು ಪಂಚಾಯತಿಯ ಶಿವಲೀಲಾ ಬಿರಾದಾರ (ಮೊ:೮೭೨೨೧೩೫೬೬೦) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
