ವಿಜಯಪುರ: ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ಸರ್ಕಾರದಿಂದ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ನೊಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ನಿರ್ವಾಹಕರು ಮತ್ತು ಕ್ಲೀನ್‌ರಗಳಿಗೂ ಅನ್ವಯಿಸುವಂತೆ ಜಾರಿಗೊಳಿಸಿದ್ದು, ಜಿಲ್ಲೆಯ ಖಾಸಗಿ ಸಾರಿಗೆ ವಾಹನಗಳ ನಿವಾಹಕರು, ಕ್ಲೀನರ್‌ಗಳು ನೊಂದಾಯಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಈ ಯೋಜನೆಯಡಿ ನೋಂದಾಯಿಸಿದ ಕಾರ್ಮಿಕರಿಗೆ ಅಪಘಾತದಿಮದ ಚಾಲಕರು, ನಿವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದ್ದಲ್ಲಿ ಅವರ ನಾಮನಿರ್ದೇಶಿತರಿಗೆ ೫ ಲಕ್ಷ ರೂ. ಪರಿಹಾರ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ೨ ಲಕ್ಷದವರೆಗೆ ಪರಿಹಾರ ಒದಗಿಸಲಾಗುತ್ತದೆ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದ ಫಲಾನುಭವಿಗೆ ಆಸ್ಪತ್ರೆ ವೆಚ್ಚದ ಮರುಪಾವತಿ, ಅಪಘಾತಕ್ಕೊಳಗಾಗಿ ೧೫ ದಿನಗಳಿಗಿಂತ ಕಡಿಮೆ ಅವದಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ೫೦ ಸಾವಿರ ರೂ.ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆ ಅದನ್ನು ಹಾಗೂ ೧೫ ದಿನಗಳಿಗಿಂತ ಹೆಚ್ಚು ದಿನ ಒಳರೊಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಠ ೧ಲಕ್ಷ ರೂ.ದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೂ ಅದನ್ನು ಮರುಪಾವತಿ ಪಡೆಯಬಹುದಾಗಿದೆ.
೨೦೧೮-೧೯ನೇ ಸಾಲಿನಿಂದ ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ ೧೦,೦೦೦ ರೈ,ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದ್ದು, ಶೈಕ್ಷಣಿಕ ಧನ ಸಹಾಯಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ನೇರವಾಗಿ ಅಥವಾ ತಾಲೂಕು-ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಸಲ್ಲಿಸಿದ್ದಲ್ಲಿ ಅರ್ಜಿಗಳನ್ನು ಪರಿಶೀಲಿಸಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಈ ಯೋಜನೆಯಡಿ ನಿರ್ವಾಹಕರು ಮತ್ತು ಕ್ಲಿನರ್‌ಗಳು ಷರತ್ತುಗಳನ್ನು ಅರ್ಹತೆಯುಳ್ಳ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಯವರ ಕಛೆರಿ, ಕಾರ್ಮಿಕ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಯನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment