ವಿಜಯಪುರ ಜಿಲ್ಲೆಯ ಮತದಾರರಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಕರಡು ಮತದಾರರ ಪಟ್ಟಿಯನ್ನು ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಆ. ೨೪ ರಂದು ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಪ್ರಕಟಪಡಿಸಲಾಗಿದೆ. ಜೊತೆಗೆ ನಿಮ್ಮ ಮತಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿ ಇರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಜೊತೆಗೆ ಚುನಾವಣಾ ಆಯೋಗದ hಣಣಠಿs://voಣeಡಿs.eಛಿi.gov.iಟಿ/ಜoತಿಟಿಟoಚಿಜ-eಡಿoಟಟ ಮತ್ತು ಜಿಲ್ಲಾ ವೆಬ್ ಪೋರ್ಟಲ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ/eಟಿ/ ದಲ್ಲಿಯೂ ಸಹ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಒಂದು ವೇಳೆ ಅರ್ಹ ಮತದಾರರ ಹೆಸರು ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಬಾರದೇ ಇದ್ದಲ್ಲಿ, ಯಾವುದಾದರೂ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಸೆ.೨೩ ರವರೆಗೆ ನಿಮ್ಮ ಮತಕ್ಷೇತ್ರದ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವ ಯಾವುದೇ ಅರ್ಹ ಮತದಾರರು ಬರುವ ಅಕ್ಟೋಬರ್ ೦೧-೨೦೨೬ ಕ್ಕೆ ೧೮ ವರ್ಷ ತುಂಬುವ ಯುವ ಮತದಾರರು ನಮೂನೆ-೬ ಅನ್ನು ಸಂಬಂಧಿಸಿದ ತಹಶೀಲ್ದಾರರ ಕಚೇರಿಗೆ, ತಮ್ಮ ಮತಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತ್ತು ಗಿoಣeಡಿ Seಡಿviಛಿe Poಡಿಣಚಿಟ, hಣಣಠಿs://voಣeಡಿs.eಛಿi.gov.iಟಿ/ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
