Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
(ರಾಜ್ಯ ) ಜಿಲ್ಲೆ

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾಗಠಾಣ ಮತಕ್ಷೇತ್ರ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ | ಮಾಜಿ ಶಾಸಕ ದೇವಾನಂದ ಚವ್ಹಾಣ ಆರೋಪ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕು ಸೇರಿದಂತೆ ನಾಗಠಾಣ ಮತಕ್ಷೇತ್ರದ ಬಹುತೇಕ ಗ್ರಾಮಗಳು ತೀವ್ರ ಮಳೆ ಕೊರತೆಯಿಂದ ಬರದ ಛಾಯೆಯಲ್ಲಿವೆ. ಆದರೆ ಜಿಲ್ಲೆಯ 13 ತಾಲ್ಲೂಕುಗಳ ಪೈಕಿ ಕೇವಲ ಮೂರು ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವುದು ಈ ಭಾಗದ ರೈತರಿಗೆ ಮಾಡಿದ ಅನ್ಯಾಯವಾಗಿದೆ. ಕೂಡಲೇ ಸಮಗ್ರ ನಾಗಠಾಣ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರೋಪಾಯಗಳನ್ನು ಕೈಗೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ದೇವಾನಂದ ಚವ್ಹಾಣ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕೇವಲ ವಿಜಯಪುರ, ನಿಡಗುಂದಿ ಹಾಗೂ ಕೊಲ್ಹಾರ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದು ಸರಿಯಲ್ಲ. ಸತತ ಬರಗಾಲದಿಂದ ತತ್ತರಿಸುತ್ತಿರುವ ಇಂಡಿ ಹಾಗೂ ಚಡಚಣ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ರೈತರಿಗೆ ಮಾಡಿದ ಬಹುದೊಡ್ಡ ದ್ರೋಹವಾಗಿದೆ ಎಂದು ಆರೋಪಿಸಿದ್ದಾರೆ.
ಚಡಚಣ ಸೇರಿದಂತೆ ನಾಗಠಾಣ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶೇ.80ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳೇ ತಿಳಿಸಿದ್ದಾರೆ. ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಮಾಡಿರುವ ಬೆಳೆಗಳು ಒಣಗಿ ನಾಶವಾಗುವ ಹಂತ ತಲುಪಿವೆ. ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನೊಂದೆಡೆ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಮೇವು ಹಾಗೂ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಲ-ಸೂಲ ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ಕೈಕೊಡುವ ಆತಂಕದಲ್ಲಿದ್ದಾರೆ. ಮಳೆ ಕೊರತೆ ಇದೇ ರೀತಿ ಮುಂದುವರಿದರೆ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಎದುರಾಗಲಿದೆ ಎಂದು ದೇವಾನಂದ ಚವ್ಹಾಣ ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಈ ಭಾಗದ ಜನಪ್ರತಿನಿಧಿಗಳು ಕೂಡಲೇ ಬರ ಪರಿಸ್ಥಿತಿಯ ಬಗ್ಗೆ ಗಂಭೀರವಾಗಿ ಗಮನಹರಿಸಬೇಕು. ಗ್ರಾಮವಾರು ಸಮಗ್ರ ಸಮೀಕ್ಷೆ ನಡೆಸಿ ಬೆಳೆ ಹಾನಿಯ ವಾಸ್ತವಿಕ ವರದಿ ಸಿದ್ಧಪಡಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ಬರ ಪರಿಹಾರ ಹಾಗೂ ಅಗತ್ಯ ಆರ್ಥಿಕ ನೆರವು ಒದಗಿಸಬೇಕು.ರೈತರ ಸಂಕಷ್ಟವನ್ನು ಕೇವಲ ಅಂಕಿ-ಅಂಶಗಳ ಮೂಲಕ ನೋಡದೆ ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ, ಸಮಗ್ರ ನಾಗಠಾಣ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೇವಾನಂದ ಚವ್ಹಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.