Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಚಡಚಣ ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತರ ಸಾಲ ಸಂಪೂರ್ಣ ಮನ್ನಾ ಹಾಗೂ ಮಧ್ಯಂತರ ಬೆಳೆ ವಿಮೆ ಪಾವತಿಗೆ ಆಗ್ರಹಿಸಿ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ ಮನವಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಚಡಚಣ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ, ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ಡಾ. ದೇವಾನಂದ ಫೂ. ಚವ್ಹಾಣ ಆಗ್ರಹಿಸಿದ್ದಾರೆ.
ಈ ಕುರಿತು ಚಡಚಣ ತಹಶೀಲ್ದಾರರಿಗೆ ಬುಧವಾರ ಮನವಿ ಸಲ್ಲಿಸಿರುವ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಚಡಚಣ ತಾಲೂಕು ಸೇರ್ಪಡೆಯಾಗದಿರುವುದು ರೈತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನ ಮೂಡಿಸಿದೆ ಈ ವರ್ಷ ಚಡಚಣ ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮುಂಗಾರು ಸಂಪೂರ್ಣ ಕೈಕೊಟ್ಟ ಪರಿಣಾಮ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಭರವಸೆಯಿಂದ ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಹಾನಿಗೊಳಗಾಗಿವೆ. ಕೃಷಿ ಚಟುವಟಿಕೆಗಳಿಗಾಗಿ ಸಾಲ ಮಾಡಿಕೊಂಡಿರುವ ರೈತರು ಇದೀಗ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ ಅಪೂರ್ಣವಾಗಿರುವ ಚಡಚಣ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿಯಿಂದ ಚಡಚಣ ಹಳ್ಳಕ್ಕೆ ನೀರು ಹರಿಸಿದರೆ ಅಂತರ್ಜಲ ಮಟ್ಟ ಹೆಚ್ಚುವುದರೊಂದಿಗೆ ತಾಲೂಕಿನ ಒಟ್ಟು ಎಂಟು ಬಾಂದಾರಗಳು ತುಂಬಲಿದ್ದು, ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ಡಾ. ದೇವಾನಂದ ಚವ್ಹಾಣ ತಿಳಿಸಿದ್ದಾರೆ.
ರೈತ ಹಸಿರು ಸೇನೆ ತಾಲೂಕ ಅಧ್ಯಕ್ಷ ವಸಂತ ಬೈರಾಮಡಿ ಮಾತನಾಡಿ ತಾಲೂಕು ಆಡಳಿತ, ಹವಾಮಾನ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಚಡಚಣ ತಾಲೂಕು ಹಾಗೂ ವಿಜಯಪುರ ಜಿಲ್ಲಾಡಳಿತ ಜಂಟಿಯಾಗಿ ತಾಲೂಕಿನಾದ್ಯಂತ ನೈಜ ಬರ ಪರಿಸ್ಥಿತಿ, ಮಳೆಯ ಕೊರತೆ, ಬೆಳೆ ಹಾನಿ, ರೈತರ ಆರ್ಥಿಕ ಸಂಕಷ್ಟ ಹಾಗೂ ಸಾಲದ ಸಮಸ್ಯೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೂಡಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚಡಚಣ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಪದೇಪದೇ ಆಶ್ವಾಸನೆ ನೀಡುತ್ತಿರುವ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಅವರು ಇದೀಗ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ ಆರೋಪಿಸಿದ್ದಾರೆ.
‘ರೈತರ ಪರವಾಗಿದ್ದೇವೆ, ರೈತರ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ’ ಎಂದು ಹೇಳುವುದು ಸುಲಭ. ಆದರೆ ರೈತರು ಸಂಕಷ್ಟದಲ್ಲಿರುವಾಗ ಅವರ ಪರವಾಗಿ ಸರ್ಕಾರದ ಮುಂದೆ ನಿಂತು ಪರಿಹಾರ ಕೊಡಿಸುವುದು ಮುಖ್ಯ. ವಿಠ್ಠಲ ಕಟಕಧೋಂಡ ಅವರು ಆಶ್ವಾಸನೆ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ’ ಎಂದು ಬನಸೋಡೆ ಟೀಕಿಸಿದ್ದಾರೆ.
ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಮಧ್ಯಂತರ ಬೆಳೆ ವಿಮೆ ಹಣವನ್ನು ಕೂಡಲೇ ಪಾವತಿಸಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಮೇವು ಕೇಂದ್ರ ಹಾಗೂ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಕ್ಷಣ ಕ್ರಮ ಕೈಗೊಂಡು ಚಡಚಣ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ,ಚಡಚಣ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡ ಮಹಾದೇವ ಕರ್ಲಮಳ, ಸತೀಶ ಬಂಡಿ, ದೀಪಕ ಕದಮ, ಪ್ರವೀಣ ಪಾಟೀಲ, ಜೆಡಿಎಸ್ ಚಡಚಣ ತಾ.ಅಧ್ಯಕ್ಷ ದಯಾನಂದ ಕಸಮೂಳೆ, ಶಕೀಲ ಖಾಟೀಕ್, ಸೋಮು ಬಡಿಗೇರ, ಮುರುಗೇಶ ಸಿಂಪಿ,ರಾಮ ಮಾಲಾಪೂರ, ಚಂದ್ರಕಾಂತ ಕಲಮನಿ, ಅಶೋಕ ಜತ್ತಿ,ರಾಜಶೇಖರ ಪೂಜಾರಿ, ಹಣಮಂತ ಧೈಗೊಂಡ,ರುದ್ರೇಶ ಬನಸೋಡೆ, ಟೀಪು ಸುಲ್ತಾನ ಕಮೀಟಿ,ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕಿನ ವಿವಿಧ ಸಂಘಟನೆಗಳ ರೈತ ಮುಖಂಡರು ಹಾಗೂ ರೈತರು ಅಪಾರ ಪ್ರಮಾಣದಲ್ಲಿ ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.