Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಳಿಯ ರಭಸಕ್ಕೆ ಕ್ರೀಡಾಕೂಟದ ಪೆಂಡಾಲ್‌ ಧರಾಶಾಯಿ!
(ರಾಜ್ಯ ) ಜಿಲ್ಲೆ

ಗಾಳಿಯ ರಭಸಕ್ಕೆ ಕ್ರೀಡಾಕೂಟದ ಪೆಂಡಾಲ್‌ ಧರಾಶಾಯಿ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ | ಮಕ್ಕಳ ಕ್ರೀಡಾಕೂಟದಲ್ಲಿ ಸುರಕ್ಷತಾ ವ್ಯವಸ್ಥೆ ಕುರಿತು ಪ್ರಶ್ನೆ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ (ಜಮಖಂಡಿ): ನಗರದ ಪೋಲೊ ಮೈದಾನದಲ್ಲಿ ಶಾಲಾ ಮಕ್ಕಳ ಕ್ರೀಡಾಕೂಟ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬೀಸಿದ ಭಾರಿ ಗಾಳಿಗೆ ಅತಿಥಿಗಳು ಹಾಗೂ ನಿರ್ಣಾಯಕರಿಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಪೆಂಡಾಲ್‌ವೊಂದು ಕಿತ್ತು ನೆಲಕ್ಕುರುಳಿದ ಘಟನೆ ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯ ಸಂಭವಿಸದೆ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ನಗರದ ಪೋಲೊ ಮೈದಾನದಲ್ಲಿ ಹುನ್ನೂರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ಆಯೋಜಿಸಲಾಗಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ, ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುತ್ತಿದ್ದರು. ವಿದ್ಯಾರ್ಥಿಗಳು ಮೈದಾನದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿದ್ದರೆ, ಮತ್ತೊಂದೆಡೆ ಅತಿಥಿಗಳು, ಶಿಕ್ಷಕರು ಹಾಗೂ ಕ್ರೀಡಾಕೂಟದ ನಿರ್ಣಾಯಕರಿಗಾಗಿ ತಾತ್ಕಾಲಿಕ ಪೆಂಡಾಲ್‌ ಅಳವಡಿಸಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು.
ಕ್ರೀಡಾಕೂಟ ನಿರಾತಂಕವಾಗಿ ನಡೆಯುತ್ತಿದ್ದ ವೇಳೆ ಮಧ್ಯಾಹ್ನದ ಹೊತ್ತಿಗೆ ಏಕಾಏಕಿ ಗಾಳಿಯ ರಭಸ ಹೆಚ್ಚಾಗಿದೆ. ಕ್ಷಣಾರ್ಧದಲ್ಲೇ ಗಾಳಿಯ ಹೊಡೆತಕ್ಕೆ ಪೆಂಡಾಲ್‌ನ ತಾತ್ಕಾಲಿಕ ರಚನೆ ಅಲುಗಾಡಿ, ಬಳಿಕ ಕಿತ್ತು ಬಂದು ಸಂಪೂರ್ಣವಾಗಿ ನೆಲಕ್ಕುರುಳಿದೆ. ಪೆಂಡಾಲ್‌ ಕುಸಿಯುತ್ತಿದ್ದಂತೆ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಅತಿಥಿಗಳು ಹಾಗೂ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದರು.
ಪೆಂಡಾಲ್‌ ಕುಸಿದ ವೇಳೆ ಅದರ ಕೆಳಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲದಿರುವುದು ದೊಡ್ಡ ಅದೃಷ್ಟವಾಗಿದ್ದು, ಇಲ್ಲದಿದ್ದರೆ ಹಲವು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿತ್ತು. ಘಟನೆಯ ಬಳಿಕ ಕೆಲಕಾಲ ಮೈದಾನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬಾಕ್ಸ್

ಸಣ್ಣ ನಿರ್ಲಕ್ಷ್ಯ ದೊಡ್ಡ ಅಪಾಯದ ಎಚ್ಚರಿಕೆ

ಶಾಲಾ ಮಕ್ಕಳ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು, ಅತಿಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ತಾತ್ಕಾಲಿಕ ಪೆಂಡಾಲ್‌, ವೇದಿಕೆ, ಬ್ಯಾರಿಕೇಡ್‌ ಸೇರಿದಂತೆ ಯಾವುದೇ ವ್ಯವಸ್ಥೆ ಅಳವಡಿಸುವಾಗ ಸುರಕ್ಷತಾ ಕ್ರಮಗಳಿಗೆ ಮೊದಲ ಆದ್ಯತೆ ನೀಡಬೇಕಾಗಿದೆ.
ವಿಶೇಷವಾಗಿ ಗಾಳಿ-ಮಳೆಯ ಮುನ್ಸೂಚನೆ ಇರುವ ಸಂದರ್ಭಗಳಲ್ಲಿ ಪೆಂಡಾಲ್‌ಗಳ ಕಂಬಗಳು ಹಾಗೂ ರಚನೆಗಳನ್ನು ಸಮರ್ಪಕವಾಗಿ ಭದ್ರಪಡಿಸಲಾಗಿದೆಯೇ ಎಂಬುದನ್ನು ಕಾರ್ಯಕ್ರಮ ಆರಂಭಕ್ಕೂ ಮುನ್ನ ಪರಿಶೀಲಿಸಬೇಕಾಗಿದೆ. ಇಲ್ಲವಾದರೆ ಸಣ್ಣದೊಂದು ನಿರ್ಲಕ್ಷ್ಯವೇ ದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂಬುದನ್ನು ಜಮಖಂಡಿಯ ಈ ಘಟನೆ ಮತ್ತೊಮ್ಮೆ ಎಚ್ಚರಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.