ಇಂಡಿ: ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಪಟ್ಟಣದ ತಾಲೂಕು ಅಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿದ ನಂತರ ಕಂದಾಯ ಇಲಾಖೆ ಶಿರಸ್ತೆದಾರ ಎಸ್ ಆರ್ ಮುಜಗೊಂಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತದನಂತರ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ ಮಾತನಾಡಿ,
ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ. ಅದಲ್ಲದೇ UK ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ಕಂಡುಬರುತ್ತದೆ. ಆದರೆ ವಿದ್ಯಾರ್ಥಿಗಳ ಖಾತೆಗೆ ಹಣ ಮಾತ್ರ ಜಮೆಗೊಂಡಿರುವುದಿಲ್ಲ. ಇನ್ನೂ ಈ ಹಿಂದಿನ ಸಾಲಿನ ಹಣ ಜಮಾವ ಆಗುವ ಮೊದಲೇ ಬರುವ ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿರುವುದು, ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟು ಮಾಡಿದೆ ಎಂದರು.
ಆದರೆ ರಾಜ್ಯ ಸರ್ಕಾರ ಈ ಕೂಡಲೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು. ಅದಲ್ಲದೇ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿವುದನ್ನು ತಪ್ಪಿಸಬೇಕು ಎಂದು ಪ್ರತಿಭಟನೆಯ ಮೂಲಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿದ್ಯಾರ್ಥಿವೇತನಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಮರ್ಥ ಗಾಯಕವಾಡ, ವಿಶಾಲ ಶಿಂದೆ, ಸೌಂದರ್ಯ ತಳವಾರ, ಗಂಗಾ ವಾಲಿ, ಸಮಿನಾ ಇನಾಮದಾರ,ಭಾಗ್ಯ ವಾಲಿಕಾರ ಉಪಸ್ಥಿತರಿದ್ದರು.
Related Posts
Add A Comment