ಚಡಚಣದಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ರಿಂದ ಸ್ಥಳ ಪರಿಶೀಲನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೆ.೫ರಂದು ಚಡಚಣ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಪ್ರಜಾಸೇವಾ ಆಂದೋಲನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಸುಲಭವಾಗಿ ಒದಗಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು

