Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಆಗ್ರಹ

ಕೆರೆ ತುಂಬಿಸಿ ಕುಡಿವ ನೀರಿನ ಸಮಸ್ಯೆ ನೀಗಿಸಲು ಒತ್ತಾಯ

ಹೆಚ್ಚುವರಿ ಬಸ್ ಸಂಚಾರಕ್ಕೆ ಗಡಿ ಗ್ರಾಮಗಳ ವಿದ್ಯಾರ್ಥಿಗಳ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟೆಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ | ರೈತರ ಕೃಷಿ ಸಾಲ ಮನ್ನಾಗೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿರುವ ಕ್ರಮವನ್ನು ಖಂಡಿಸಿ, ಜಿಲ್ಲೆಯ ತಾಳಿಕೋಟೆ, ದೇ.ಹಿಪ್ಪರಗಿ, ಮುದ್ದೇಬಿಹಾಳ ಒಳಗೊಂಡು ಉಳಿದ ಹತ್ತು ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಗುರುವಾರರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿದ ಬಳಿಕ ಅನಿರ್ದಿಷ್ಟ ಧರಣಿ ಆರಂಭಿಸಿದರು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಮಾತನಾಡಿ, ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಜಿಲ್ಲೆಯ ಯಾವುದೇ ಶಾಸಕರು ರೈತರ ಪರವಾಗಿ ಧ್ವನಿ ಎತ್ತುತ್ತಿಲ್ಲ. ಜನಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇನ್ನೋರ್ವ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ ಹಾಗೂ ಜಿಲ್ಲಾಧ್ಯಕ್ಷ ಉಮೇಶ್ ವಾಲಿಕಾರ ಮಾತನಾಡಿ, ರೈತರ ಕೃಷಿಗಾಗಿ ರಾಷ್ಟೀಕೃತ ಬ್ಯಾಂಕುಗಳು ಹಾಗೂ ಸಹಕಾರಿ ಸಂಘಗಳಲ್ಲಿ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ಅವರು ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಾವಿರಾರು ರೈತರು ಬೀದಿಗಿಳಿದು ಜಿಲ್ಲೆಯ ಶಾಸಕರ ವಿರುದ್ಧ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ತಾಳಿಕೋಟೆ ತಾಲೂಕಾ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ, ಶಾಂತಗೌಡ ಬಿರಾದಾರ, ಶ್ರೀನಿವಾಸ ಗೊಟಗುಣಕಿ, ಗುರುನಾಥ ರೆಡ್ಡಿ, ರಾಮನಗೌಡ ಯಾಳವಾರ, ಪ್ರಭು ಅಂಬಿಗೇರ, ಬಸನಗೌಡ ಸೌದಿ, ಅರುಣಕುಮಾರ ಬಿರಾದಾರ, ಸಂತೋಷ ಬಿರಾದಾರ, ಬಸ್ಸು ಬನ್ನಟ್ಟಿ, ಆನಂದ ಲಿಂಗದಳ್ಳಿ, ಮುತ್ತುಗೌಡ ಬಿರಾದಾರ, ಭೀಮನಗೌಡ ಪಾಟೀಲ, ಬಸನಗೌಡ ಬಿರಾದಾರ, ಪಂಪನಗೌಡ ಬಿರಾದಾರ ಒಳಗೊಂಡು ನೂರಾರು ರೈತರು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಆಗ್ರಹ

ಕೆರೆ ತುಂಬಿಸಿ ಕುಡಿವ ನೀರಿನ ಸಮಸ್ಯೆ ನೀಗಿಸಲು ಒತ್ತಾಯ

ಹೆಚ್ಚುವರಿ ಬಸ್ ಸಂಚಾರಕ್ಕೆ ಗಡಿ ಗ್ರಾಮಗಳ ವಿದ್ಯಾರ್ಥಿಗಳ ಆಗ್ರಹ

ಡಾ.ಮಹಾಂತೇಶ ಬಿರಾದಾರ ಗೆ ಅಪ್ಪ ರಾಜ್ಯ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕೆರೆ ತುಂಬಿಸಿ ಕುಡಿವ ನೀರಿನ ಸಮಸ್ಯೆ ನೀಗಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಹೆಚ್ಚುವರಿ ಬಸ್ ಸಂಚಾರಕ್ಕೆ ಗಡಿ ಗ್ರಾಮಗಳ ವಿದ್ಯಾರ್ಥಿಗಳ ಆಗ್ರಹ
    In (ರಾಜ್ಯ ) ಜಿಲ್ಲೆ
  • ಡಾ.ಮಹಾಂತೇಶ ಬಿರಾದಾರ ಗೆ ಅಪ್ಪ ರಾಜ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸ್ಮಾರ್ಟ ಆಗಿ ಓದಿ, ನೀಟ್ ಸುಲಭವಾಗಿ ಪಾಸಾಗಿ :ಗೋಡಿಹಾಳ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ ನಗರ ಕಂದಾಯ ಗ್ರಾಮವನ್ನಾಗಿ ಮಾಡಲು ಮನವಿ
    In (ರಾಜ್ಯ ) ಜಿಲ್ಲೆ
  • ಶಾಸಕರು- ಸಚಿವರು ಈಗ್ಲಾದ್ರೂ ರೈತರ ಪರವಾಗಿ ಧ್ವನಿ ಎತ್ತಲಿ
    In (ರಾಜ್ಯ ) ಜಿಲ್ಲೆ
  • ಮಲ್ಲಯ್ಯ ದೇಗುಲ ಮುಂದೆ ನೈರ್ಮಲ್ಯ ಕಾಪಾಡಲು ಸಮಿತಿ ಮನವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.