Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
(ರಾಜ್ಯ ) ಜಿಲ್ಲೆ

ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕಿನ ವಿವಿಧ ಗ್ರಾ.ಪಂ ಗಳ ವಿಬಿ–ಜಿ ರಾಮ್–ಜಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ರಿಷಿ ಆನಂದ ಕೂಲಿ ಕಾರ್ಮಿಕರಿಗೆ ಅಭಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಅವರಿಗೆ ಸ್ವಗ್ರಾಮದಲ್ಲಿಯೇ ನಿರಂತರ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ, ಬಬಲಾದ, ಬಳ್ಳೊಳ್ಳಿ ಹಾಗೂ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆ (ವಿಬಿ–ಜಿ ರಾಮ್–ಜಿ) ಯಡಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಆರಂಭದಲ್ಲಿ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ ಗ್ರಾಮದ ಕಾಲುವೆ ಪುನಶ್ಚೇತನ ಕಾಮಗಾರಿ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಇಂಗು ಕೆರೆ, ಬಳ್ಳೊಳ್ಳಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಹಾಗೂ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಕಂದಕ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು.
ಗ್ರಾಮೀಣ ಮಹಿಳೆಯರು ಉದ್ಯೋಗಕ್ಕೆ ಬರಲು ಪ್ರೇರೇಪಿಸಬೇಕು. ಗ್ರಾ.ಪಂ. ವ್ಯಾಪ್ತಿಯ ಗ್ರಾಮ ಕಾಯಕ ಮಿತ್ರರು, ಬೇರ್‌ಫುಟ್ ಟೆಕ್ನಿಷಿಯನ್‌ಗಳು, ಕಾಯಕ ಬಂಧುಗಳು, ಕೃಷಿ ಸಖಿಯರು, ಪಶು ಸಖಿಯರು, ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಗ್ರಾಮೀಣ ಜನರಲ್ಲಿ ಯೋಜನೆಯ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಗ್ರಾಮೀಣ ಕುಟುಂಬಗಳು ವಿಬಿ–ಜಿ ರಾಮ್–ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದರು.
ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕನಿಷ್ಠ ೨೦೦ ರಿಂದ ೩೦೦ ಕೂಲಿಕಾರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಯೋಜಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ವಿಬಿ–ಜಿ ರಾಮ್–ಜಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಇದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಎಲ್ಲಾ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕಾಮಗಾರಿ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ವೇಳೆ ಕೂಲಿಕಾರರೊಂದಿಗೆ ಮಾತನಾಡಿದ ಸಿಇಒ ಅವರು, ಬರಗಾಲದ ಸಂದರ್ಭದಲ್ಲಿ ಉದ್ಯೋಗಕ್ಕಾಗಿ ದೂರದ ಊರುಗಳಿಗೆ ವಲಸೆ ಹೋಗುವ ಬದಲು ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಪಡೆಯುವಂತೆ ತಿಳಿಸಿದರು.
ವೈಯಕ್ತಿಕ ಕಾಮಗಾರಿಗಳನ್ನು ತಮ್ಮ ಜಮೀನಿನಲ್ಲಿಯೇ ಕೃಷಿ ಹೊಂಡ, ದನದ ಕೊಟ್ಟಿಗೆ, ಕೋಳಿ ಶೆಡ್, ಮೇಕೆ ಶೆಡ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಅವಕಾಶವಿದೆ ಎಂದರು.

ಬಬಲಾದ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಮಗಾರಿ ಸ್ಥಳದಲ್ಲಿ ಜಿ.ಪಂ. ಸಿಇಓ ರವರೇ ಕೂಲಿ ಕಾರ್ಮಿಕರಿಗೆ ಉಪಹಾರವನ್ನು ಬಡಿಸಿ ಸಂತಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ (ಪಿ.ಎಮ್.ಎಸ್.ಬಿ.ವೈ)ಯ ಫಲಾನುಭವಿಯಾದ ಶ್ರೀಮತಿ ದಾನಮ್ಮ ಸುರೇಶ ಹಂಚನಾಳ ಇವರಿಗೆ ವಿಬಿ–ಜಿ ರಾಮ್–ಜಿ ಯೋಜನೆಯ ಕಾಮಗಾರಿ ಸ್ಥಳದಲ್ಲಿಯೇ ₹೨ ಲಕ್ಷದ ಪರಿಹಾರ ಮೊತ್ತದ ಚೆಕ್ ಅನ್ನು ಜಿ.ಪಂ.ನ ಸಿಇಓ ರವರು ವಿತರಿಸಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹದೇವಪ್ಪ ಏವೂರ, ಸಹಾಯಕ ನಿರ್ದೇಶಕರು (ಗ್ರಾ.ಉ) ಸಂಜಯ ಖಡೆಗೇಕರ, ಬಬಲಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಜಿ. ಪಾರೆ, ಝಳಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ ಪಾಟೀಲ, ಬಸನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ನಿಲಂಗಿ, ಇಂಗಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಬಿರಾದಾರ, ಕೆನರಾ ಬ್ಯಾಂಕ್ನ ಮ್ಯಾನೇಜರ್ ವಿಠ್ಠಲ ಗೌರಿ, ಎಲ್ ಡಿ ಎಂ ಸಿದ್ದಯ್ಯ, ಅಸಿಸ್ಟೆಂಟ್ ನಾಗಪ್ಪ ಮಿಂಚನಾಳ, ಅರ್ಥಿಕ ಸಾಕ್ಷರತಾ ಸಲಹೆಗಾರ ಭರತೇಶ ಉಪಾಧ್ಯೆ, ಸಿ ಎಪ್ ಎಲ್ ಮದರ್ ಎನ್. ಮತ್ತಿತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.