ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೧೮ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಮಹಾನಿಂಗ ನಂದಗಾಂವಿ ಅವರು ವಿಜಯಪುರದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಸೆ.೨ರಂದು ವಹಿಸಿಕೊಂಡಿದ್ದಾರೆ.
ವಿಜಯಪುರ ಲೋಕಾಯುಕ್ತ ಕಚೇರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ದೂರುಗಳು ಅಥವಾ ಅಹವಾಲುಗಳನ್ನು ಹೊಂದಿದ್ದಲ್ಲಿ ನೇರವಾಗಿ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅಲ್ಲದೆ, ಮೊಬೈಲ್ ಸಂಖ್ಯೆ ೯೩೬೪೦೬೨೫೨೮ ಅಥವಾ ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೨೯೫೦೭೪ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

