ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ, (ಜಮಖಂಡಿ): ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) 9ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಏಪ್ರಿಲ್ 2026ರಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಪಡಸಲಗಿ ಐಬಿಸಿ (IBC) ಸಿದ್ರಾಮ್ ಇಟ್ಟಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಐಪಿಪಿಬಿ ಬ್ಯಾಂಕಿಂಗ್ ಸೇವೆಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಅನುಕೂಲವಾಗುತ್ತಿರುವ ಕುರಿತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. “ಜನರ ವಿಶ್ವಾಸವೇ ನಮ್ಮ ಶಕ್ತಿ. ಅವರ ಸೇವೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ” ಎಂದು ಸಿದ್ರಾಮ್ ಇಟ್ಟಿ ಪತ್ರಿಕೆಗೆ ಪ್ರತಿಕ್ರಿಯಿಸಿದರು.

