ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದವತಿಯಿಂದ ‘ಸಾಧಕರೊಂದಿಗೆ ಸಂವಾದ’ ವಿಶೇಷ ಕಾರ್ಯಕ್ರಮವನ್ನು ಸೆ.೫ರಂದು ಆಯೋಜಿಸಲಾಗಿದೆ. ಕಾರ್ಯಕ್ರಮವು ಶನಿವಾರ ಸಂಜೆ ೪ ಗಂಟೆಗೆ ವಿಜಯಪುರದ ಬಿ.ಎಲ್.ಡಿ.ಇ. ಕ್ಯಾಂಪಸ್‌ನಲ್ಲಿರುವ ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆಯಲಿದೆ. ಇತಿಹಾಸ ತಜ್ಞರು ಹಾಗೂ ಹಿರಿಯ ಸಂಶೋಧಕರಾದ ಡಾ. ಕೃಷ್ಣ ಕೊಲ್ಲಾರಕುಲಕರ್ಣಿ ಅವರು ಕಾರ್ಯಕ್ರಮದಲ್ಲಿ ಮುಖ್ಯ ಸಾಧಕರಾಗಿ ಭಾಗವಹಿಸಿ, ತಮ್ಮ ಸಾಹಿತ್ಯಿಕ ಹಾಗೂ ಸಂಶೋಧನಾ ಕ್ಷೇತ್ರದ ಅನುಭವ, ಸಾಧನೆ ಮತ್ತು ಕಾರ್ಯಚಟುವಟಿಕೆಗಳ ಕುರಿತು ಸಂವಾದ ನಡೆಸಲಿದ್ದಾರೆ.
ಸಾಹಿತ್ಯ, ಇತಿಹಾಸ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ಸಾಧಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅನುಭವ ಹಾಗೂ ವಿಚಾರಗಳನ್ನು ಅರಿಯಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ. ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಹಾಗೂ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
