ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ಗಿರೀಶ್ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಜಿಲ್ಲಾ ಪ್ರಜಾಸೇವೆ ಅಭಿಯಾನ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಅವರು ವಿಜಯಪುರದಿಂದ ಬೆಂಗಳೂರಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
