ಉದಯರಶ್ಮಿ ದಿನಪತ್ರಿಕೆ
ಇಂಡಿ: ವಿಜಯಪುರ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಹಾಗೂ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಸೆಪ್ಟೆಂಬರ್ ೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಎಸ್.ಬಿ. ಕೆಂಬೋಗಿ ಹೇಳಿದರು.
ಅವರು ಶುಕ್ರವಾರ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.
ಕರವೇ ಮುಖಂಡ ಶ್ರೀಶೈಲ ಮುಳಜಿ, ಭೀಮರಾಯ ಪೂಜಾರಿ, ಅದೃಷ್ಯಪ್ಪ ವಾಲಿ, ತಮ್ಮಾರಾಯ ಆಸಂಗಿ ಮಾತನಾಡಿ, ಈ ಪ್ರತಿಭಟನೆಯಲ್ಲಿ ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಹಕ್ಕುಗಳಿಗಾಗಿ ಧ್ವನಿಯಾಗಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಮಾಳಪ್ಪ ಪೂಜಾರಿ, ಮಲ್ಲಪ್ಪ ಹಿರೇಕುರುಬರ, ಮಲ್ಲು ಬಳಗಾರಿ ಸೇರಿದಂತೆ ಇನ್ನಿತರರು ಇದ್ದರು.

