ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತೆರೆಯ ಮರೆಯ ಕಾಯಿ ಯಂತೆ ಇರುವ ಅದ್ಭುತವಾದ ಪ್ರತಿಭೆಗಳನ್ನು ತಯಾರಿಸುವ ಶಿಕ್ಷಕರಿಗೆ ಗೌರವಿಸಿರುವುದು ಕವಿವಾಣಿ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಸಾಹಿತಿ ಡಾ.ಸಮೀರ ಹಾದಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ಕವಿವಾಣಿ ಸಾಹಿತ್ಯ ಪರಿಷತ್ತು, ಕರ್ನಾಟಕ ಜಿಲ್ಲಾ ಘಟಕ ವಿಜಯಪುರ ರವರು ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಶ್ರೇಷ್ಠ ತತ್ವಜ್ಞಾನಿ, ಶಿಕ್ಷಣ ಚಿಂತಕರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜಯಂತಿ ಹಾಗೂ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಈ ದಿನ ದಂದು ಬಾಲಭಾರತಿ ಶಾಲೆಯ ಶಿಕ್ಷಕರ ಒಗ್ಗಟ್ಟು, ಶಿಸ್ತು ಬದ್ಧ ಪಾಠಬೋಧನೆ ಮುಖಾಂತರ ಪಟ್ಟಣದಲ್ಲಿ ಜನಮನ್ನಣೆ ಸಂಪಾದನೆ ಮಾಡಿರುವ ಶಿಕ್ಷಕರ ಕಾರ್ಯವನ್ನು ಗುರುತಿಸಿ ಕವಿವಾಣಿ ಸಾಹಿತ್ಯ ಪರಿಷತ್ತು ಎಲ್ಲ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿರುವುದು ಅಭಿನಂದನಾಹ್ರ ಕಾರ್ಯ ಎಂದರು.
ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಜಿಲ್ಲಾಧ್ಯಕ್ಷ ಕುದರತ್ ಅಲಿ ಭೂಸನೂರ ರವರು ಕವಿವಾಣಿ ಸಾಹಿತ್ಯ ಪರಿಷತ್ತು ಉತ್ತಮ ಕಾರ್ಯವನ್ನು ಮಾಡುವವರನ್ನು ಗುರುತಿಸಿ ಅಭಿನಂದನೆ ಸಲ್ಲಿಸುವ ಕಾರ್ಯ ನಿರಂತರವಾಗಿ ಮಾಡುತ್ತಾ ಬಂದಿದ್ದು.ಗ್ರಾಮೀಣ ಮಟ್ಟದ ಅತ್ಯಂತ ಹಿಂದುಳಿದ ಪ್ರದೇಶದ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಪಾಠ ಬೋಧನೆ,ಹಾಗೂ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸದಾಕಾಲ ಕ್ರಿಯಾಶೀಲ ಇರುವ ಬಾಲಭಾರತಿ ಶಾಲೆಯ ಸಿಬ್ಬಂದಿ ಯವರನ್ನು ಗೌರವಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮುಂದೆ ಇನ್ನೂ ಹೆಚ್ಚಿನ ರೀತಿಯಲ್ಲಿ ಶೈಕ್ಷಣಿಕ ವಾಗಿ ಶ್ರಮಿಸುವಂತೆ ಶುಭ ಹಾರೈಸಿದರು.
ಈ ವೇಳೆ ಸಾನಿಧ್ಯ ವಹಿಸಿದ ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು, ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ ,ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿದರು.
ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ಐಶ್ವರ್ಯ ಬೇಪಾರಿ, ಅಂಜಲಿ ಕನ್ನೊಳ್ಳಿ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

