ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟದಲ್ಲಿ ಸೆಪ್ಟೆಂಬರ್ 7 ರ ಸೋಮವಾರ ಸಂಜೆ 5.30ಕ್ಕೆ ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಎಲ್ಲ ಗಜಾನನ ಮಂಡಳಿಗಳ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದು, ಇದೇ ವೇಳೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ 2026ನೇ ಸಾಲಿನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಕಾರಣ ವಿಜಯಪುರ ನಗರದ ಎಲ್ಲ ಗಜಾನನ ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಹಾಗೂ ಮಹಾನಗರ ಪಾಲಿಕೆಯ ಹಾಲಿ/ಮಾಜಿ ಸದಸ್ಯರು, ಮುಖಂಡರು, ಗಣ್ಯರು, ಹಿತೈಷಿಗಳು, ಅಭಿಮಾನಿಗಳು, ವ್ಯಾಪಾರಸ್ಥರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ, ಸಭೆಗೆ ಶೋಭೆ ತರಬೇಕೆಂದು ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷ ಚಂದ್ರಶೇಖರ ಚೌದರಿ ಅವರು ವಿನಂತಿಸಿದ್ದಾರೆ.
