ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅಹವಾಲು ಹಾಗೂ ಕುಂದುಕೊರತೆಗಳನ್ನು ಆಲಿಸಲು ಸೆ.೭ರಂದು ಸೋಮವಾರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ ೩.೩೦ರಿಂದ ೪.೩೦ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ೬೩೬೬೪೨೩೮೮೭ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಾರಿಗೆ ಸೌಕರ್ಯಕ್ಕೆ ಸಂಬಂಧಿಸಿದ ಅಹವಾಲು ಹಾಗೂ ಕುಂದುಕೊರತೆಗಳನ್ನು. ತಿಳಿಸಬಹುದಾಗಿದೆ ಸ್ವೀಕರಿಸಲಾದ ಅಹವಾಲುಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಕರಾಸಾ ನಿಗಮ ನಿಯಂತ್ರಣ ಅಧಿಕಾರಿ ಅವರ ಪ್ರಕಟಣೆ ತಿಳಿಸಿದೆ.
