ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಕಲಿಕೆಯ ಜೊತೆಗೆ ಕನಸುಗಳನ್ನು ನನಸಾಗಿಸುವ ಸಹೃದಯತೆ, ಜ್ಞಾನಾರ್ಜನೆ, ಸ್ನೇಹಪರತೆ, ಸಮಾಜದ ಸದೃಢತೆ ಕಾಪಾಡುವ ನಿಟ್ಟಿನಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದು ಡಾ ಯಂಕನಗೌಡ ಎಸ್ ಪಾಟೀಲ್ ಹೇಳಿದರು.
ಪಟ್ಟಣದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಮಯ ಪ್ರಜ್ಞೆ, ಆತ್ಮವಿಶ್ವಾಸ, ತುಂಬುವ ಮೂಲಕ ಶಿಸ್ತು, ತಾಳ್ಮೆ, ಸಹಕಾರ, ಸೌಹಾರ್ದತೆ, ಸಹಬಾಳ್ವೆ, ಸಮಾನತೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವಲ್ಲಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೊರ ತರುವ ಶ್ರೇಯಸ್ಸು ಶಿಕ್ಷಕರಿಗೆ ಸಲ್ಲುತ್ತದೆ ಎಂದರು.
ಸಾನಿಧ್ಯ ವಹಿಸಿದ ಚನ್ನಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಇದೇ ವೇಳೆ ಒಂದು ವಾರಗಳ ಕಾಲ ಶಿಕ್ಷಕರಿಗೆ ವಿದ್ಯಾರ್ಥಿಗಳೆಲ್ಲರೂ ಸೇರಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ಗೆದ್ದ ತಂಡಕ್ಕೆ, ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶಾಲಾ ಸಂಚಾಲಕ ಗುರು ಕುಂಬಾರ, ಈರಣ್ಣ ಚರಂತಿಮಠ, ಗುತ್ತನಗೌಡ ಬಿರಾದಾರ, ವಾಸಿಂ ಪಟೇಲ್, ಸದ್ದಾಂ ಬಾಣ್ಣಾಳ, ದೇವರಡ್ಡಿ ಬಿರಾದಾರ ಭಾರತಿ ಎಂ, ಭಾರತಿ ಎಂ ಕೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

