Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
(ರಾಜ್ಯ ) ಜಿಲ್ಲೆ

ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸಿ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರಿಗೆ ಸಾಮೂಹಿಕ ಮನವಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲರಿಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಸಾಮೂಹಿಕವಾಗಿ ಮನವಿ ಸಲ್ಲಿಸಿದರು.
ಝಳಕಿ ಗ್ರಾಮದ ಚಡಚಣ ರಸ್ತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ ಮುಖಂಡರು, ಇಂಡಿ ತಾಲೂಕು ಹಿಂದಿನಿಂದಲೂ ಬರಗಾಲದ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಬಾರಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಹದಗೆಟ್ಟಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ರಾಜ್ಯ ಸರ್ಕಾರ ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಝಳಕಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಸುಮಾರು 10 ನಿಮಿಷಗಳ ಕಾಲ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗಿತ್ತು. ಬಳಿಕ ತಾಲೂಕು ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸಚಿವರಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಘವೇಂದ್ರ ಕಾಪಸೆ, ಕರ್ನಾಟಕ ರಕ್ಷಣಾ ವೇದಿಕೆ ಇಂಡಿ ತಾಲೂಕು ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರ ಸೇರಿದಂತೆ ಹಲವರು ಮಾತನಾಡಿದರು.
ರವಿ ನಾವಿ, ರವಿಕುಮಾರ್ ಹೂಗಾರ, ರವೀಂದ್ರ ತೇಲಿ, ಸುಭಾಷ ಚಟ್ಟರಕಿ, ಬಾಪೂರಾಯ ಲೋಣಿ, ಬಸಗೊಂಡಪ್ಪ ಪಾಟೀಲ, ರಾಜೂಗೌಡ ಪಾಟೀಲ, ವಿಠ್ಠಲ ಶಿರಷ್ಯಾಡ, ಅರವಿಂದ ಪೂಜಾರಿ, ಮಹಾದೇವ ಹಾಡಸಂಗೆ, ವಿಠ್ಠಲ ಕಾಗರ, ಬಾಲಕೃಷ್ಣ ಭೋಸಲೆ, ಶರಣಯ್ಯ ಮಠಪತಿ ಸೇರಿದಂತೆ ಬಳ್ಳೊಳ್ಳಿ, ಝಳಕಿ, ಜೇವೂರ, ಅರ್ಜನಾಳ ಹಾಗೂ ಮೈಲಾರ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಸಚಿವರಿಗೆ ಮನವಿ ಸಲ್ಲಿಸಲು ಝಳಕಿ ಗ್ರಾಮದ ಚಡಚಣ ರಸ್ತೆಯ ಬದಿ ಕಡು ಬಿಸಿಲಲ್ಲಿ ಸತತ 8 ಗಂಟೆ ಕಾಲ ರೈತರು ಕಾಯಬೇಕಾಯಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.