ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಆಯೋಜಿಸಿದ್ದ ‘ಅಂಬೇಡ್ಕರ್ ಓದು’ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಿಸುವ ಕಾರ್ಯಕ್ರಮವನ್ನು ಸೆ.೮ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಗಾಂಧಿ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಕಾಶ ಮೇತ್ರಿ ಅಧ್ಯಕ್ಷತೆ ವಹಿಸುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಎಸ್. ಪೂಜಾರಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
