Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ
(ರಾಜ್ಯ ) ಜಿಲ್ಲೆ

ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಗ್ನಿವೀರ ನೇಮಕಾತಿ ರ‍್ಯಾಲಿ: ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ ೧೦ ರಿಂದ ೨೩ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಸೋಮವಾರ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿ ನೇಮಕಾತಿ ರ‍್ಯಾಲಿಗೆ ಕೈಗೊಳ್ಳಲಾಗಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ನೇಮಕಾತಿ ರ‍್ಯಾಲಿಗೆ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಅನಾನುಕೂಲವಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ನೇಮಕಾತಿ ಸ್ಥಳಕ್ಕೆ ತಲುಪಲು ಅನುಕೂಲವಾಗುವಂತೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ನೇಮಕಾತಿ ರ‍್ಯಾಲಿಯು ಜಿಲ್ಲೆಯ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು, ಭಾರತೀಯ ಸೇನೆಗೆ ಸೇರ್ಪಡೆಯಾಗಲು ಯುವಜನರಿಗೆ ದೊರೆಯುವ ಮಹತ್ವದ ಅವಕಾಶವಾಗಿದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯು ಯಾವುದೇ ಅಡೆತಡೆಯಿಲ್ಲದೆ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಅಭ್ಯರ್ಥಿಗಳಿಗೆ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ಒದಗಿಸುವುದರ ಜೊತೆಗೆ, ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಂಗಳೂರಿನ ಆರ್ಮಿ ರಿಕ್ರೂಟ್‌ಮೆಂಟ್ ಕಚೇರಿಯ ನಿರ್ದೇಶಕ ಕರ್ನಲ್ ಜಿ. ಸೋಮು ಮಹಾರಾಜನ್, ಅಭಿಜಿತ್ ಸಿಂಗ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ವಿನಯಕುಮಾರ್ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಸೇರಿದಂತೆ ಅನೇಕರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.