Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
(ರಾಜ್ಯ ) ಜಿಲ್ಲೆ

ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಿಕ್ಷಕ ರಾಷ್ಟ್ರ ರಕ್ಷಕನಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಬಾಳು ಬೆಳಗಲು ಶ್ರಮವಹಿಸುತ್ತಾರೆ. ವಿದ್ಯೆ ನೀಡುವುದು ಪವಿತ್ರ ಕಾರ್ಯವಾಗಿದೆ. ನಮಗೆ ಕಲಿಸಿದ ಗುರುಗಳ ಸ್ಮರಣೆ ಅವಶ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಣದಿಂದಲೇ ಮುಂದೆ ಬರಲು ಸಾಧ್ಯವಾಗುತ್ತದೆ. ಗುರುವಿನ ಕೀರ್ತಿ ಅತ್ಯಂತ ಹಿರಿದಾಗಿದೆ. ಪ್ರತಿಯೊಬ್ಬರೂ ಶಿಕ್ಷಕ ವೃತ್ತಿಗೆ ಗೌರವ ನೀಡುವ ಮೂಲಕ ನಮ್ಮತನ ಹೆಚ್ಚಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಶಿಕ್ಷಕ ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದು, ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣವೇ ಮೂಲಕಾರಣವಾಗಿದೆ. ಅದರ ಕೇಂದ್ರಬಿಂದು ಶಿಕ್ಷಕರಾಗಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮವಾಗಿ ಬಂದಿದೆ ಮುಂಬರುವ ದಿನಗಳಲ್ಲಿಯೂ ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು. ಜಿಪಂ ನಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ, ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಎಲ್ಲ ಜನಪ್ರತಿನಿಧಿಗಳು, ಮೇಲಾಧಿಕಾರಿಗಳು ಸಹಕಾರ ಮಾರ್ಗದರ್ಶನ ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಗುಣಮಟ್ಟದ ಶಿಕ್ಷಣ ನೀಡುವತ್ತ ಕ್ರಮವಹಿಸಲಾಗುವುದು ಶಿಕ್ಷಕ ದಿನಾಚರಣೆ ಸಮಾರಂಭ ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ದನ್ಯವಾದಗಳು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಡಯಟ್ ಪ್ರಾಚಾರ್ಯರಾದ ಶ್ರೀಮತಿ ಎಸ್ ಎಸ್ ಮುಜಾವರ, ಕಾರ್ಯಕ್ರಮ ಸಂಘಟಕ ನಗರವಲಯದ ಕ್ಷೇತ್ರಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರು, ನಗರ ವಲಯದ ೧೨ ಶಿಕ್ಷಕರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ವಸಂತ ಹೊನಮೊಡೆ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಹಣಮಂತ ಕೊಣದಿ, ನಗರ ಘಟಕದ ಅಧ್ಯಕ್ಷ ಜುಬೇರ ಕೆರೂರ, ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ ಬಿರಾದಾರ, ಇಓ ನಾಗರಾಜ, ಕಬೂಲ್ ಕೊಕಟನೂರ, ಎಸ್ ಎಸ್ ಬೇನೂರ, ಎಂ ಎಚ್ ನಾಡಗೇರಿ, ಸಿ ಎಚ್ ಬಿರಾದಾರ, ಮಂಜುನಾಥ ಅರೆಶಂಕರ, ಶಿವಾನಂದ ಹಿರೇಕುರುಬರ, ಅಕ್ಕುಬಾಯಿ ನಾಯಕ, ಜಯಶ್ರೀ ಹೂಗಾರ, ಮಲ್ಲನಗೌಡ ಹಡಲಗೇರಿ, ಬಸೀರ ನದಾಫ, ಗಿರೀಶ ಬಿರಾದಾರ, ಎಸ್ ಎನ್ ಪಡಶೆಟ್ಟಿ, ರುದ್ರಮ್ಮ ಗಿಡ್ಡಪ್ಪಗೋಳ, ಸುನೀಲ ಯಳಮೇಲಿ, ಜಮೀರ ನಾಗರಬಾವಡಿ ಸೇರಿದಂತೆ ಜಿಲ್ಲೆಯ ವಿವಿಧ ಬಾಗಗಳಿಂದ ಬಂದ ಶಿಕ್ಷಕ ಸಮುಹ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.