ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜನಪದ ಸಂಗಮ ಎಂಬ ಹೊಸ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಈ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು ಹಾಗೂ ಬುಡಕಟ್ಟು ಜನಾಂಗದವರಿಗೆ ಜಾನಪದ ಕಲಾಪ್ರಕಾರಗಳ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಉಚಿತ ತರಬೇತಿಗೆ ೧೬ ರಿಂದ ೪೦ ವರ್ಷ ವಯೋಮಾನದ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–೫೬೦೦೦೨ ಈ ವಿಳಾಸಕ್ಕೆ ಸೆಪ್ಟೆಂಬರ್.೧೬, ರೊಳಗಾಗಿ ತಲುಪುವಂತೆ ಕಳುಹಿಸುವಂತೆಯೂ,
ಅರ್ಜಿ ನಮೂನೆಯನ್ನು ಅಕಾಡೆಮಿಯ ಅಧಿಕೃತ ವೆಬ್‌ಸೈಟ್ hಣಣಠಿs://ರಿಚಿಟಿಚಿಠಿಚಿಜಚಿ.ಞಚಿಡಿಟಿಚಿಣಚಿಞಚಿ.gov.iಟಿ/ ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಡಿegisಣಡಿಚಿಡಿ.ರಿಚಿಟಿಚಿಠಿಚಿಜಚಿ@gmಚಿiಟ.ಛಿom ಇ-ಮೇಲ್ ಅಥವಾ ದೂರವಾಣಿ ಸಂಖ್ಯೆ ೦೮೦-೨೨೨೧೫೫೦೯ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
