ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್ ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ ಆ. ೨೪ ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಬಯಸುವ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ ೧೯ ಮತ್ತು ೨೦ ರಂದು ವಿಶೇಷ ಆಂದೋಲನ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಅರ್ಹ ಮತದಾರರು ಮತ್ತು ಅಕ್ಟೋಬರ್ ೦೧, ೨೦೨೬ ಕ್ಕೆ ೧೮ ವರ್ಷ ಪೂರೈಸುವ ಯುವ ಮತದಾರರ ಅನುಕೂಲಕ್ಕಾಗಿ ದಿನಾಂಕ ೧೯-೦೯-೨೦೨೬ (ಶನಿವಾರ) ಮತ್ತು ೨೦-೦೯-೨೦೨೬ (ಭಾನುವಾರ) ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ದಿನಗಳಲ್ಲಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳು ಬೆಳಿಗ್ಗೆಯಿಂದಲೇ ತಮ್ಮ ತಮ್ಮ ಮತಗಟ್ಟೆಗಳಲ್ಲಿ ಲಭ್ಯವಿರುತ್ತಾರೆ. ಸಾರ್ವಜನಿಕರು ನೇರವಾಗಿ ಬಿ.ಎಲ್.ಓ.ಗಳನ್ನು ಭೇಟಿ ಮಾಡಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಹೆಸರು ಸೇರ್ಪಡೆ: ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-೬ಎ: ಅನಿವಾಸಿ ಭಾರತೀಯರಿಗಾಗಿ ನಮೂನೆ-೭: ಪಟ್ಟಿಯಿಂದ ಹೆಸರು ತೆಗೆದುಹಾಕಲು (ಆಕ್ಷೇಪಣೆ) ನಮೂನೆ-೮: ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ ಮತ್ತು ಗುರುತಿನ ಚೀಟಿ ಬದಲಾವಣೆಗಾಗಿ ಆನ್‌ಲೈನ್ ಹಾಗೂ ಕಚೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಆಂದೋಲನದ ದಿನಗಳನ್ನು ಹೊರತುಪಡಿಸಿ, ಬಾಕಿ ಉಳಿದ ದಿನಗಳಲ್ಲಿ ಸಾರ್ವಜನಿಕರು ಸಂಬಂಧಿಸಿದ ತಹಶೀಲ್ದಾರ್ ಕಚೇರಿ ಅಥವಾ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದು. ಜೊತೆಗೆ, ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ hಣಣಠಿs://voಣeಡಿs.eಛಿi.gov.iಟಿ/ (ಗಿoಣeಡಿ Seಡಿviಛಿe Poಡಿಣಚಿಟ) ಮೂಲಕವೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮಾಹಿತಿ ತಾರ್ಕಿಕವಾಗಿ ಹೊಂದಾಣಿಕೆಯಾಗದ ಮತ್ತು ೨೦೦೨ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಆಗದ ಜಿಲ್ಲೆಯ ಒಟ್ಟು ೨೪,೫೨೪ ಮತದಾರರಿಗೆ ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ಪ್ರಕ್ರಿಯೆ ನಡೆಸುತ್ತಿದ್ದಾರೆ. ಇಂತಹ ಮತದಾರರಿಗೆ ಈಗಾಗಲೇ ನೋಟಿಸ್ ನೀಡಲಾಗುತ್ತಿದ್ದು, ನೋಟಿಸ್‌ನಲ್ಲಿಯೇ ವಿಚಾರಣೆಯ ಸ್ಥಳ ಹಾಗೂ ದಿನಾಂಕವನ್ನು ನಮೂದಿಸಲಾಗಿದೆ.
ನೋಟಿಸ್ ಪಡೆದ ಮತದಾರರು ನಿಗದಿತ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ ವಿಚಾರಣಾ ಸ್ಥಳಕ್ಕೆ ಹಾಜರಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅರ್ಹ ನಾಗರಿಕರು ಮತ್ತು ಯುವ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿಸುವುದನ್ನು ಖಚಿತಪಡಿಸಿಕೊಳ್ಳಬೇಕಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

