Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
(ರಾಜ್ಯ ) ಜಿಲ್ಲೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕು ಘಟಕದಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹೆಸರಿನಲ್ಲಿ ದೂರು ನೀಡಿರುವುದನ್ನು ಖಂಡಿಸಿ, ಬಂಗ್ಲೆ ಮಲ್ಲಿಕಾರ್ಜುನ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕು ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರ್ ಕೆರೆಪ್ಪ ಬೆಳ್ಳಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಅಲ್ಲಾಪುರ, ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಸಂಘದ ಮಾಜಿ ಅಧ್ಯಕ್ಷ ಆನಂದ ಶಾಬಾದಿ ಮಾತನಾಡಿ, ಬಂಗ್ಲೆ ಮಲ್ಲಿಕಾರ್ಜುನ ಅವರು ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಾ ದೂರು ನೀಡಿರುವುದು ಖಂಡನೀಯ. ಉದ್ದೇಶಪೂರ್ವಕವಾಗಿ ಸಂಘದ ರಾಜ್ಯಾಧ್ಯಕ್ಷರ ಘನತೆಗೆ ಧಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಆದ್ದರಿಂದ ಬಂಗ್ಲೆ ಮಲ್ಲಿಕಾರ್ಜುನ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಹಿತಾಸಕ್ತಿ, ವೃತ್ತಿ ಭದ್ರತೆ ಹಾಗೂ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಚುನಾಯಿತ ಪದಾಧಿಕಾರಿಗಳ ವಿರುದ್ಧ ವೈಯಕ್ತಿಕ ದ್ವೇಷ ಅಥವಾ ಸಂಘದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಆಧಾರರಹಿತ ದೂರುಗಳನ್ನು ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಶೇಖ, ಉಪಾಧ್ಯಕ್ಷ ಭೀಮು ಕೆಂಭಾವಿ, ಕಾರ್ಯದರ್ಶಿ ನವೀನ ಶೇಳ್ಳಗಿ, ಕಾರ್ಯಕಾರಿ ಸದಸ್ಯ ವಿನಯಕುಮಾರ ಅಗಸರ, ಸಿದ್ದು ಕಡಗಂಚಿ, ಸದಸ್ಯರಾದ ರಾಕೇಶ ಕಂಠಿಗೊಂಡ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಗುರುರಾಜ ಮಠ, ಸುದರ್ಶನ ಜಂಗಣ್ಣಿ, ಶಾಂತವೀರ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.