Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
(ರಾಜ್ಯ ) ಜಿಲ್ಲೆ

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ | ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಬಗ್ಗೆ ಸ್ವಯಂಘೋಷಿತ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹೆಸರಿನಲ್ಲಿ ದೂರು ನೀಡಿರುವುದನ್ನು ಖಂಡಿಸಿ, ಬಂಗ್ಲೆ ಮಲ್ಲಿಕಾರ್ಜನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಬಂಗ್ಲೆ ಮಲ್ಲಿಕಾರ್ಜುನ ಅವರು ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಬಗ್ಗೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರಗುಪ್ಪದಲ್ಲೂ ಪೊಲೀಸ್ ಪ್ರಕರಣ ದಾಖಲಾದ ಬಳಿಕ ಊರು ತೊರೆದಿರುತ್ತಾರೆ. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಬಚಾವ್ ಆಗಿರುವುದು ಹಸಿಹಸಿಯಾಗಿದೆ. ಇಂಥಹ ಹಿನ್ನೆಲೆಯ ಬಂಗ್ಲೆ ಮಲ್ಲಿಕಾರ್ಜುನ ಅವರು, ಚುನಾವಣಾ ಪ್ರಕ್ರಿಯೆ ಮೂಲಕ ಅಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಬಗ್ಗೆ ಇಲ್ಲಸಲ್ಲದ ದೂರು ನೀಡಿರುವುದು ಖಂಡನೀಯ. ಕಾರಣ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಕೆಯುಡಬ್ಲ್ಯೂಜೆ, ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಸಹಯೋಗ ಹೊಂದಿದ್ದು, ಸರ್ಕಾರದ ಮಾನ್ಯತೆ ಹೊಂದಿರುವ ಪತ್ರಕರ್ತರ
ಏಕೈಕ ಸಂಘಟನೆಯಾಗಿದೆ. ಸಂಘದ ಮತ್ತು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ಮೇಲಿನ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಉದ್ದೇಶಪೂರ್ವಕವಾಗಿ ಅವರ ತೇಜೋವಧೆಗೆ ಮುಂದಾಗಿರುವ ಬಂಗ್ಲೆ ಮಲ್ಲಿಕಾರ್ಜನ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸದಸ್ಯ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಬಸವರಾಜ ಉಳ್ಳಾಗಡ್ಡಿ, ಸಮೀರ ಇನಾಮದಾರ, ಜಿಲ್ಲಾ ಖಜಾಂಚಿ ರಾಹುಲ ಆಪ್ಟೆ, ಜಿಲ್ಲಾ ಕಾರ್ಯದರ್ಶಿ ಸದ್ದಾಂ ಜಮಾದಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರು ಗದ್ದನಕೇರಿ, ಸಂಜೀವ ಕುಲಕರ್ಣಿ, ಗೋಪಾಲ ಕನಿಮಣಿ, ಶಂಕರ ಜಲ್ಲಿ, ಶಿವಾನಂದ ಶಿವಶರಣ, ಸುರೇಶ ತೇರದಾಳ, ಪ್ರಭು ಕುಮಟಗಿ, ಪತ್ರಕರ್ತರಾದ ಷಡಕ್ಷರಿ ಕಂಪೂನವರ, ಪ್ರದೀಪ್ ಕುಲಕರ್ಣಿ, ಸುನೀಲ ಗೋಡೆನ್ನವರ, ಚಂದ್ರಕಾಂತ ಮಾವೂರ, ರವಿ ಜಹಾಗೀರದಾರ ಸೇರಿದಂತೆ ಹಲವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!

ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಷ್ಟಗಳೆದುರಿಸಿ, ಸಾಧನೆಯ ಹಾದಿಯನೇರಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.