Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
(ರಾಜ್ಯ ) ಜಿಲ್ಲೆ

ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಈ ಸಭೆಗಳು ಜರುಗಲಿವೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಎರಡನೇ ತಾಲೂಕು ಮಟ್ಟದ ಸಭೆಯು ಶಾಸಕರಾದ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದ ಸಿಂದಗಿಯ ಬಸವ ಮಂಟಪದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ನಡೆಯಲಿದೆ.
ಇದರೊಂದಿಗೆ ವಿವಿಧ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ತಾಲೂಕಾ ಹಾಗೂ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆಗಳ ವೇಳಾಪಟ್ಟಿಯಂತೆ, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ತಾಳಿಕೋಟೆಯ ವಿಜಯಪುರ ರಸ್ತೆಯಲ್ಲಿರುವ ಸಂಗಮೇಶ್ವರ ಸಭಾ ಭವನದಲ್ಲಿ ಸೆಪ್ಟೆಂಬರ್ ೧೨ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ, ಢವವಳಗಿ ಹೋಬಳಿಯ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ಸಭಾಭವನದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ಮುದ್ದೇಬಿಹಾಳದ ಕರ್ನಾಟಕ ಕೋ-ಆಪರೇಟಿವ್ ಎ.ಪಿ.ಎಂ.ಸಿ ಮಂಗಲ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಶಾಸಕರಾದ ಅಪ್ಪಾಜಿ ಸಿ.ಎಸ್. ನಾಡಗೌಡ ಅವರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಸಾತಿಹಾಳ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೧೨ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ, ಕೊರವಾರ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ಮುಳಸಾವಳಗಿಯ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಶಾಸಕ ರಾಜುಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವ ಆಂದೋಲನ ಸಭೆ ನಡೆಯಲಿದೆ.
ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಕೋಲಾರದ ವಾರ್ಡ್ ನಂ. ೧೨ರ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ನಿಡಗುಂದಿಯ ಕಮದಾಳ ಪುನರ್ ವಸತಿ ಕೇಂದ್ರದ ಶ್ರೀ ಮುದ್ದೇಶ್ವರ ದೇವಸ್ಥಾನ ಸಭಾ ಭವನದ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಶಾಸಕರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಸಭೆ ನಿಗದಿಪಡಿಸಲಾಗಿದೆ.
ವಿಜಯಪುರ ನಗರ ಕ್ಷೇತ್ರದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಠಾಣ ಗ್ರಾಮ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ಸೆಪ್ಟೆಂಬರ್ ೧೨ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ, ಹಲಸಂಗಿಯ ಬಜಾರ್ ರಸ್ತೆಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ಹಡಗಲಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಶಾಸಕ ವಿಠಲ ಕಟಕದೊಂಡ ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಸಭೆ ನಡೆಯಲಿವೆ.
ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಯಶವಂತ್ರಾಯಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಅಥರ್ಗಾ ಗ್ರಾಮ ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ಸೆಪ್ಟೆಂಬರ್ ೧೨ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ, ಸಾಲೋಟಗಿಯ ಶ್ರೀ ಶಿವಯೋಗೇಶ್ವರ ದೇವಸ್ಥಾನ ಆವರಣದಲ್ಲಿ ಸೆಪ್ಟೆಂಬರ್ ೧೯ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ಹೋರ್ತಿ ಗ್ರಾಮ ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿವೆ.
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಸಿಂದಗಿ ತಾಲೂಕಿನ ಯರಗಲ್ ಬಿ.ಕೆಯಲ್ಲಿ ಸೆಪ್ಟೆಂಬರ್ ೧೨ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹಾಗೂ ಆಲಮೇಲ ತಾಲೂಕಿನ ಮಲಘಾಣ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೨೬ರ ಶನಿವಾರ ಬೆಳಿಗ್ಗೆ ೧೦:೩೦ಕ್ಕೆ ಹೋಬಳಿ ಮಟ್ಟದ ಸಭೆ ಶಾಸಕ ಅಶೋಕ ಎಂ. ಮನಗೂಳಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರು ಈ ಸಭೆಗಳಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆಯೂ ಹಾಗೂ ಆಯಾ ತಾಲೂಕು ಮತ್ತು ಜಿಲ್ಲಾ ಮಟ್ಟದ ನಿಯೋಜಿತ ಅಧಿಕಾರಿಗಳು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಸಭೆಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.