Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
(ರಾಜ್ಯ ) ಜಿಲ್ಲೆ

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ, ಮೈಸೂರು ಅರಮನೆ ಸೇರಿ ರಾಜ್ಯದ ಪಾರಂಪರಿಕ ಕಟ್ಟಡಗಳು!

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ.
ಈ ಹಿನ್ನೆಲೆಯಲ್ಲಿ ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು, ತುಂಗಭದ್ರಾ ಜಲಾಶಯ, ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು ದಿನಗಳ ಕಾಲ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.
ಬೆಂಗಳೂರಿನ ಪುರಭವನ, ಕೆ.ಆರ್.ಪುರಂ‌ ತೂಗುಸೇತುವೆ, ಮೈಸೂರು ಅರಮನೆ ಹಾಗೂ
ಜಯಮಾರ್ತಾಂಡ ಮಹಾದ್ವಾರ, ಐತಿಹಾಸಿಕ ಹಂಪಿಯ ವಿಶ್ವವಿಖ್ಯಾತ ವಿರೂಪಾಕ್ಷೇಶ್ವರ ದೇವಾಲಯದ ಬಿಷ್ಟಪ್ಪಯ್ಯನ ಗೋಪುರ, ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ, ಜಗತ್ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿವೆ. ಸರ್ಕಾರದ ಅಭಿವೃದ್ಧಿ ಯೋಜನೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಬಿಂಬಿಸುವ ಮನಮೋಹಕ ಎಲ್‌ಇಡಿ ಪ್ರದರ್ಶನಗಳು ,ಧ್ವನಿ ಮತ್ತು ಬೆಳಕು ,ತ್ರಿ ಡಿ ಮ್ಯಾಪಿಂಗ್ ಪ್ರದರ್ಶನಗಳ ಆಯ್ದ ಕಟ್ಟಡಗಳ ಮೇಲೆ ಬಿತ್ತರಗೊಳ್ಳಲಿವೆ.
ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಡಳಿತ ವತಿಯಿಂದಲೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೇರಿ ನೂರು ದಿನಗಳ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಾರ್ವಜನಿಕರ ಕುಂದು ಕೊರತೆ , ಅಹವಾಲು ಆಲಿಸಿ, ಪರಿಹರಿಸಲು “ಪ್ರಜಾಸೇವಾ” ಇಲಾಖೆ ಸ್ಥಾಪನೆ, ಗ್ಯಾರಂಟಿ ಯೋಜನೆಗಳಡಿ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ, ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ಪಡೆ ರಚನೆ, ಕೇಂದ್ರದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಬೇಡಿಗಳ ಪ್ರಬಲ ಮಂಡನೆ, ನೂತನ ಸಿಎಸ್‌ಆರ್ ನೀತಿ ಕ್ರಮ, ಬರಪರಿಸ್ಥಿತಿ ನಿರ್ವಹಣೆಗೆ ವಿಭಾಗವಾರು ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆ ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಒತ್ತು, ಕೊಪ್ಪಳ, ರಾಯಚೂರು, ವಿಜಯನಗರ ,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿರುವ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹೊಸ ಸ್ಪಿಲ್ ವೇ ಗೇಟುಗಳ ಉದ್ಘಾಟನೆ, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ,72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ.
ಮುಖ್ಯಮಂತ್ರಿಗಳು ಮುಂಬರುವ ದಿನಗಳಲ್ಲಿ ದೃಢ ಕರ್ನಾಟಕದ ಸಂಕಲ್ಪಕ್ಕೆ ಮಹತ್ವದ ಹೆಜ್ಜೆಗಳನ್ನು ಇಡಲು ಆಲೋಚಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್‌.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.