ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿ ೧೦೦ ದಿನ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಆಲಮಟ್ಟಿ ಜಲಾಶಯಕ್ಕೆ ವರ್ಣಮಯ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಗುರುವಾರ ಸಂಜೆ ವಿದ್ಯುತ್ ದೀಪಗಳ ಅಲಂಕಾರದಲ್ಲಿ ಆಲಮಟ್ಟಿ ಜಲಾಶಯ ವರ್ಣರಂಜಿತವಾಗಿ ಕಂಗೊಳಿಸಿತು.
ಈ ವಿಶೇಷ ದೀಪಾಲಂಕಾರವು ಸೆಪ್ಟೆಂಬರ್ ೧೦ ಮತ್ತು ೧೧, ಎರಡು ದಿನಗಳ ಕಾಲ ಇರಲಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

