Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸದಿದ್ದರೆ ಹೆದ್ದಾರಿ ಬಂದ್
(ರಾಜ್ಯ ) ಜಿಲ್ಲೆ

ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸದಿದ್ದರೆ ಹೆದ್ದಾರಿ ಬಂದ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.16ಕ್ಕೆ ಕೊಲ್ಹಾರದಲ್ಲಿ ರೈತ ಜನತಾ ಸಭೆ | ಜಿಲ್ಲಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳ ಖುದ್ದು ಹಾಜರಿಗೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾದ ಕೊಲ್ಹಾರ ಪಟ್ಟಣ ಹಾಗೂ ತಾಲೂಕು ವ್ಯಾಪ್ತಿಯ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ಸೆ.16ರಂದು ಬೃಹತ್ ಪ್ರತಿಭಟನೆ ಹಾಗೂ ರೈತ ಜನತಾ ಸಭೆ ಹಮ್ಮಿಕೊಳ್ಳಲಾಗಿದೆ.
ಸಂತ್ರಸ್ತರಿಗೆ ಸೂಕ್ತ ನಿವೇಶನ ಹಂಚಿಕೆ ಮಾಡದಿರುವುದು, ನೆಪವೊಡ್ಡಿ ಉತಾರೆ ನೀಡದೆ ವಿಳಂಬ ಮಾಡುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದಿರುವುದನ್ನು ಖಂಡಿಸಿ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸೆ.16ರ ಬೆಳಿಗ್ಗೆ 12 ಗಂಟೆಯೊಳಗೆ ಕೊಲ್ಹಾರ ಪಟ್ಟಣ ಪಂಚಾಯಿತಿ ಎದುರು ನಡೆಯುವ ರೈತ ಜನತಾ ಸಭೆಗೆ ವಿಜಯಪುರ ಜಿಲ್ಲಾಧಿಕಾರಿ, ಬಾಗಲಕೋಟೆ ಪುನರ್ವಸತಿ ಹಾಗೂ ಭೂಸ್ವಾಧೀನ ಅಧಿಕಾರಿಗಳು, ಆಲಮಟ್ಟಿ ಪುನರ್ವಸತಿ ಅಧಿಕಾರಿಗಳು, ಹೆಸ್ಕಾಂ ಅಧೀಕ್ಷಕ ಅಭಿಯಂತರರು ಹಾಗೂ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರು ಖುದ್ದು ಆಗಮಿಸಿ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಬೇಕು ಎಂದು ತಾಲೂಕು ಅಧ್ಯಕ್ಷ ಸೋಮು ಭೀ. ಬಿರಾದಾರ ಹಾಗೂ ಸಂತ್ರಸ್ತರು ಆಗ್ರಹಿಸಿದ್ದಾರೆ.
ನಿವೇಶನ ಹಂಚಿಕೆಯಲ್ಲಿನ ತಾರತಮ್ಯ ನಿವಾರಿಸಿ, ಸಿಓಡಿ ಪ್ರಕರಣ ಹೊರತುಪಡಿಸಿ ನೈಜ ಮೂಲ ಸಂತ್ರಸ್ತರಿಗೆ ತಕ್ಷಣ ಉತಾರೆ ನೀಡಬೇಕು. ಸಿಓಡಿ ತನಿಖಾ ವರದಿಯನ್ನು ಬಹಿರಂಗಪಡಿಸಬೇಕು. ಕುಟುಂಬದ ಎಲ್ಲ ಮಕ್ಕಳಿಗೂ ನಿವೇಶನ ನೀಡಬೇಕು ಹಾಗೂ ಬಡತನದ ಕಾರಣ ಮಾರಾಟವಾದ ಅಥವಾ ಪಡೆದ ನಿವೇಶನಗಳ ರದ್ದು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ.
ಕೊಲ್ಹಾರ ಪಟ್ಟಣದ ಅಸಮರ್ಪಕ ಒಳಚರಂಡಿ ಕಾಮಗಾರಿಯನ್ನು ಸರಿಪಡಿಸಿ, ಕಾಮಗಾರಿಯಲ್ಲಿನ ಲೋಪದ ಕುರಿತು ತನಿಖೆ ನಡೆಸಬೇಕು. ಮುಳವಾಡ ಏತ ನೀರಾವರಿ ‘ಎ’ ಮತ್ತು ‘ಬಿ’ ಸ್ಕೀಮ್ ಮೂಲಕ ಅಖಂಡ ವಿಜಯಪುರ ಜಿಲ್ಲೆಯ ಕೆರೆಗಳನ್ನು ತುಂಬಿಸಲು 2027ರ ಜನವರಿಯಿಂದ ಜುಲೈವರೆಗೆ 20 ಟಿಎಂಸಿ ನೀರು ಕಾಯ್ದಿರಿಸಬೇಕು. ರೈತರ ಜಮೀನುಗಳಿಗೆ ಸಮರ್ಪಕ 2 ಫೇಸ್ ಹಾಗೂ 3 ಫೇಸ್ ವಿದ್ಯುತ್ ಪೂರೈಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಹಾಗೂ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದಿದ್ದರೆ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರ ಸೇತುವೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಕಲ್ಲಪ್ಪ ಗಿಡ್ಡಪ್ಪಗೋಳ, ರಮೇಶ ಬೀಳಗಿ, ಶಶಿಕಾಂತ ಬಿರಾದಾರ, ಸತೀಶ ಕುಲ್ಲಳ್ಳಿ, ಮುದಕನ್ನ ಚಲವಾದಿ, ಯಮನಪ್ಪ ಬಿಸ್ಟಗೊಂಡ, ಸಂಗಪ್ಪ ಗುಳಗೊಂಡ ಸೇರಿದಂತೆ ಹಲವು ಸಂತ್ರಸ್ತರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026
    In ದಿನಪತ್ರಿಕೆ
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.