Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
(ರಾಜ್ಯ ) ಜಿಲ್ಲೆ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಪತ್ರಕರ್ತರಿಂದ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶಿವಾನಂದ ತಗಡೂರ ಅವರು ರಾಜ್ಯದ ಪತ್ರಕರ್ತರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ನಾಯಕರಾಗಿದ್ದು, ಅವರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ದುರುದ್ದೇಶಪೂರಿತವಾಗಿವೆ. ಸತ್ಯಾಸತ್ಯತೆ ಪರಿಶೀಲಿಸದೆ ಆರೋಪ ಮಾಡುವ ಪ್ರವೃತ್ತಿಗೆ ಕಡಿವಾಣ ಬೀಳಬೇಕೆಂದು ಹಿರಿಯ ಪತ್ರಕರ್ತ ಎ.ಸಿ. ಪಾಟೀಲ ಒತ್ತಾಯಿಸಿದರು.
ಗುರುವಾರ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ವಿರುದ್ಧ ಕೆಲವರು ಮಾಡಿರುವ ಆಧಾರ ರಹಿತ ಹಾಗೂ ಸುಳ್ಳು ಆರೋಪಗಳನ್ನು ಖಂಡಿಸಿ ಪತ್ರಕರ್ತರು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು.
ಪ್ರಾಮಾಣಿಕವಾಗಿ ಕಾರ್ಯ ಮಾಡುವವರ ತೇಜೋವಧೆ ಸರಿಯಲ್ಲ. ಇಡೀ ಪತ್ರಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯ ಶಿವಾನಂದ ತಗಡೂರ ಮಾಡಿದ್ದಾರೆ ಎಂದರು.
ಇನ್ನೋರ್ವ ಹಿರಿಯ ಪತ್ರಕರ್ತ ಉಮೇಶ ಕೋಳೇಕರ ಮಾತನಾಡಿ, ಪತ್ರಕರ್ತರ ಸಂಘವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಇಂತಹ ಬೆಳವಣಿಗೆಗಳು ಪತ್ರಕರ್ತರ ಏಕತೆಗೆ ಧಕ್ಕೆ ಉಂಟುಮಾಡಲಿದ್ದು, ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕೆಂದರು.
ಉಮೇಶ ಬಳಬಟ್ಟಿ ಮಾತನಾಡಿ, ಆಧಾರರಹಿತ ಆರೋಪಗಳ ಮೂಲಕ ವ್ಯಕ್ತಿತ್ವ ಹರಣ ಮಾಡಲು ಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಖಾಜು ಸಿಂಗೆಗೋಳ ಮಾತನಾಡಿ, ಸತ್ಯಾಂಶವನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ಯಲಗೊಂಡ ಬೇವನೂರ, ಶರಣು ಕಾಂಬಳೆ, ಶಂಕರ ಜಮಾದಾರ ಮಾತನಾಡಿದರು.
ಕಾನಿಪ ಸಂಘದ ಖಜಾಂಚಿ ಆನಂದ ಗಣಾಚಾರಿ, ಸಚಿನ್ ಇಂಡಿ, ಜೈಭೀಮ ಸಿಂಗೆ, ತುಕಾರಾಮ ಪವಾರ, ಗುರು ದಶವಂತ, ಅಲ್ಲಾಭಕ್ಷ ಗೋರೆ, ಲಾಲಸಿಂಗ ರಾಠೋಡ, ಮಲ್ಲು ಹಾವಿನಾಳಮಠ, ಫಯಾಜ ಬಾಗವಾನ, ಸಿದ್ದಯ್ಯ ಮಠ, ಚಂದ್ರಶೇಖರ ಮೇಲಿನಮನಿ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ

ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
  • ಬರಪೀಡಿತವೆಂದು ಘೋಷಿಸದಿದ್ದರೆ ಭಾವಿಗಿಳಿದು ಹೋರಾಟ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.