ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಚ್‌ಐವಿ/ಏಡ್ಸ್ ತಡೆಗಟ್ಟುವಿಕೆ, ಚಿಕಿತ್ಸೆ ಹಾಗೂ ಕಳಂಕ, ತಾರತಮ್ಯ ನಿರ್ಮೂಲನೆ ಜಾಗೃತಿ ಅಭಿಯಾನದ ಭಾಗವಾಗಿ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರ ನೇತೃತ್ವದಲ್ಲಿ ಸೆ.೦೮ ರಂದು ಜಿಲ್ಲಾ ಮಟ್ಟದ ೫ ಕಿ.ಮೀ ಮ್ಯಾರಾಥಾನ್ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ನಗರದ ಗೋಲ್ ಗುಂಬಜ್‌ನಿಂದ ಜಿಲ್ಲಾ ಆಸ್ಪತ್ರೆಯವರೆಗೆ ನಡೆದ ಮ್ಯಾರಾಥಾನಲ್ಲಿ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಅಜಯ್ ತನೇಕೇದಾರ್ ದ್ವಿತೀಯ ಸ್ಥಾನ ೩೦೦೦ ನಗದು ಬಹುಮಾನ ಪಡೆದುಕೊಂಡರು. ಅದೆ ತೆರನಾಗಿ ಭಾಗವಹಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.
ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಎ.ಟಿ.ಶ್ರೀನಿವಾಸ, ದೈಹಿಕ ನಿರ್ದೇಶಕ ಎಸ್.ಎ.ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ.ಮಿಲನ್ ರಾಠೋಡ ಡಾ.ತರನ್ನುಮ್ ಜಬೀನ್ ಖಾನ್ ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಿದರು.

