Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ
(ರಾಜ್ಯ ) ಜಿಲ್ಲೆ

ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸಾಲ ಅರ್ಜಿಗಳ ವಿಲೇವಾರಿಗೆ ಒಂದು ವಾರದ ಗಡುವು ನೀಡಿದ ಜಿಪಂ ಉಪಕಾರ್ಯದರ್ಶಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬ್ಯಾಂಕಿಗೆ ಅಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿ ಹಾಗೂ ಸಕಾರಾತ್ಮಕ ಮನೋಭಾವದಿಂದ ವರ್ತಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ನಿಗದಿತ ಅವಧಿಯಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಸಾಲ ಸೌಲಭ್ಯಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬಾಕಿ ಉಳಿಸಬಾರದು ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ಶುಕ್ರವಾರ ದ ಜಿಲ್ಲಾ ಪಂಚಾಯತಿಯಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಹಾಗೂ ಡಿಸ್ಟ್ರಿಕ್ಟ್ ಲೆವೆಲ್ ರಿವಿವ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಯಾಂಕಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಬರುವ ಗ್ರಾಹಕರಿಗೆ ಬ್ಯಾಂಕಿನ ಅಧಿಕಾರಿಗಳು ಸೂಕ್ತ ಸ್ಪಂದನೆ ನೀಡಬೇಕು. ಭಾರತೀಯ ರಿಸರ್ವ್ ಬ್ಯಾಂಕಿನ ಮಾರ್ಗಸೂಚಿಗಳಂತೆ ಬ್ಯಾಂಕಿಂಗ್ ಯೋಜನೆಗಳು ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಗ್ರಾಹಕರಿಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದಾಖಲಾತಿಗಳು ಅಪೂರ್ಣವಾಗಿದ್ದರೆ, ಅರ್ಜಿದಾರರನ್ನು ಅಲೆದಾಡಿಸದೇ ಅಗತ್ಯ ಇರುವ ದಾಖಲೆ ತಿಳಿಸಿ ಅರ್ಜಿ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಸೂಚಿಸಿದರು.ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಂಡು ವಿಳಂಬ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರತಿಯೊಂದು ಅರ್ಜಿಯನ್ನು ನಿಗದಿತ ಕಾಲಮಿತಿಯೊಳಗೆ ಪರಿಶೀಲಿಸಿ ವಿಲೇವಾರಿ ಮಾಡಿ ಎಂದರು.
ನಿಗದಿತ ಅವಧಿಯಲ್ಲಿಯೂ ಅರ್ಜಿಗಳನ್ನು ವಿಲೇವಾರಿ ಮಾಡದೆ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ಡಿ.ಎಸ್.ಪಿ ಸುನಿಲ ಕಾಂಬಳೆ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ, ಆರ್ಬಿಐ ವ್ಯವಸ್ಥಾಪಕರಾದ ಶೀಲ್ ಪ್ರಿಯಾ ಗೌತಮ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ

ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ
    In (ರಾಜ್ಯ ) ಜಿಲ್ಲೆ
  • ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಅಗ್ನಿವೀರ್ ನೇಮಕಾತಿ ರ‍್ಯಾಲಿ: ಪ್ರಕ್ರಿಯೆ ಪರಿಶೀಲಿಸಿದ ಡಿಸಿ, ಎಸ್ಪಿ
    In (ರಾಜ್ಯ ) ಜಿಲ್ಲೆ
  • ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸೋಣ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಮಟ್ಟದ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯಕ್ಕೆ ಉದ್ಯಮದ ಸ್ಪರ್ಶ; ಮಹಿಳೆಗೆ ಸ್ವಾವಲಂಬನೆಯ ಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.