ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ನ್ಯಾಯವಾದಿ ಹಾಗೂ ಪತ್ರಕರ್ತ ಚೇತನ.ಮ.ಶಿವಶಿಂಪಿ ಅವರಿಗೆ ರಾಜ್ಯ ಯೂತ್ ಫಾರ್ ಹ್ಯೂಮನ್ ರೈಟ್ಸ್ ವತಿಯಿಂದ ಕೊಡಮಾಡುವ ವೀರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಿವಶಿಂಪಿ ಅವರ ಸಮಾಜಮುಖಿ ಕಾರ್ಯಗಳಲ್ಲಿನ ಧೈರ್ಯ, ಸಾಹಸವನ್ನು ಮೆಚ್ಚಿ ಸೆ.೧೩ ರಂದು ಪಟ್ಟಣದ ಪಂಜುರ್ಲಿ ಫಂಕ್ಷನ್ ಹಾಲ್ ನಲ್ಲಿ ನಡೆಯುವ ಮಾನವ ಹಕ್ಕುಗಳ ಜಾಗೃತಿ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಧಾನಿ ವಾಲಿಕಾರ ತಿಳಿಸಿದ್ದಾರೆ.

