Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೧೩ ರಂದು ಮಾನವ ಹಕ್ಕುಗಳ ಜಾಗೃತಿ ಸಮಾವೇಶ

ಚೇತನ ಶಿವಶಿಂಪಿಗೆ ವೀರ ರತ್ನ ಪ್ರಶಸ್ತಿ

ಸೆ.೧೫ರಿಂದ ಯುವ ಸಂಸತ್ತು ಸಭೆಗೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೩ ರಂದು ಮಾನವ ಹಕ್ಕುಗಳ ಜಾಗೃತಿ ಸಮಾವೇಶ
(ರಾಜ್ಯ ) ಜಿಲ್ಲೆ

ಸೆ.೧೩ ರಂದು ಮಾನವ ಹಕ್ಕುಗಳ ಜಾಗೃತಿ ಸಮಾವೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಕ್ಷೇತ್ರಗಳ ೭೫ ಜನ ಸಾಧಕರಿಗೆ ಪ್ರಶಸ್ತಿ ಪ್ರದಾನ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸೆ.೧೩ರಂದು ಬೆಳಿಗ್ಗೆ ೧೦:೩೦ ಕ್ಕೆ ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಫಂಕ್ಷನ್ ಹಾಲ್ ನಲ್ಲಿ ರಾಜ್ಯ ಯೂತ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾ ಸಮಿತಿ ಹಾಗೂ ವಿವಿಧ ಘಟಕಗಳ ಸಹಯೋಗದಲ್ಲಿ ಮಾನವ ಹಕ್ಕುಗಳ ಜಾಗೃತಿ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮಾನವ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಒಟ್ಟು ೭೫ ಸಾಧಕರನ್ನು ಗುರುತಿಸಿ ಹಸಿರು-ಉಸಿರು, ಸಮಾಜ ರತ್ನ, ವೀರ ರತ್ನ ಮತ್ತು ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಮಹತ್ವ, ಸಂವಿಧಾನಾತ್ಮಕ ಹಕ್ಕುಗಳು, ಸಾಮಾಜಿಕ ನ್ಯಾಯ ಹಾಗೂ ಹಕ್ಕುಗಳ ಉಲ್ಲಂಘನೆಯ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ.
ಕಾರ್ಯಕ್ರಮವನ್ನು ನಿವೃತ್ತ ನ್ಯಾಯವಾದಿ ಜಿ.ಕೆ.ಗೋಖಲೆ ಉದ್ಘಾಟಿಸಲಿದ್ದು, ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಮಾನವ ಹಕ್ಕುಗಳ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಉಮೇಶ ಎನ್ ಪುಷ್ಪನಮನ ಸಲ್ಲಿಸಲಿದ್ದು, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ದ ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿ ಎ.ಬಿ.ಹೊಸಮನಿ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಎಂ.ಬಾಬುನಾಯಕ, ಜಿ.ಎಂ.ದಯಾನಂದ, ಬಿ.ಆರ್.ಪ್ರವೀಣಕುಮಾರ, ಕುಮಾರ ಎನ್, ಅಭಿಷೇಕ ಚಕ್ರವರ್ತಿ, ಸುಭ್ರಹ್ಮಣ್ಯ ಡಿ.ವಿ, ಪುಟ್ಟರಂಗಯ್ಯ ಎನ್, ಸುಭ್ರಹ್ಮಣ್ಯ ಪೂಜಾರಿ, ಕೆ.ಜಯಚಂದ್ರ, ಅಯ್ಯಪ್ಪ ದೊಡಮನಿ, ಸದಾಶಿವ ಅಂಗಡಿ ಭಾಗವಹಿಸಲಿದ್ದಾರೆ.
ಮಾನವ ಹಕ್ಕುಗಳ ರಕ್ಷಣೆಯೊಂದಿಗೆ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಧಾನಿ ವಾಲಿಕಾರ ಸೇರಿದಂತೆ ಎಲ್ಲ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚೇತನ ಶಿವಶಿಂಪಿಗೆ ವೀರ ರತ್ನ ಪ್ರಶಸ್ತಿ

ಸೆ.೧೫ರಿಂದ ಯುವ ಸಂಸತ್ತು ಸಭೆಗೆ ಚಾಲನೆ

ಮಧುಮಾಸ ಚಂದ್ರಮ ಕಣ್ಣಿಗದು ಭೂಷಣ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 12,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೧೩ ರಂದು ಮಾನವ ಹಕ್ಕುಗಳ ಜಾಗೃತಿ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಚೇತನ ಶಿವಶಿಂಪಿಗೆ ವೀರ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸೆ.೧೫ರಿಂದ ಯುವ ಸಂಸತ್ತು ಸಭೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಧುಮಾಸ ಚಂದ್ರಮ ಕಣ್ಣಿಗದು ಭೂಷಣ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 12,2026
    In ದಿನಪತ್ರಿಕೆ
  • ನೇಕಾರ ಸಮ್ಮಾನ್ ಯೋಜನೆಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಸೆ.೨೩ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ
    In (ರಾಜ್ಯ ) ಜಿಲ್ಲೆ
  • ನಾಟಕ ಅಕಾಡೆಮಿಯಿಂದ ರಂಗಭೂಮಿ ಸದೃಢಗೊಳಿಸುವ ಕಾರ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.