ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ಪಟ್ಟಣದ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯ ೧೧೦/೧೧ ಕೆ.ವಿ. ತಾಳಿಕೋಟೆ ವಿದ್ಯುತ್ ಉಪಕೇಂದ್ರದಿಂದ ಹೊರಹೋಗುವ ೧೧ ಕೆ.ವಿ. ತಾಳಿಕೋಟೆ ಪಟ್ಟಣ ಮಾರ್ಗಕ್ಕೆ ಹೆಚ್ಚುವರಿ ಫೀಡರ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೧೩ರಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಈ ಕಾಮಗಾರಿಯ ಹಿನ್ನೆಲೆಯಲ್ಲಿ ತಾಳಿಕೋಟಿ, ಮಿಣಜಗಿ, ಬಳಗಾನೂರ, ತಮದಡ್ಡಿ, ಬಿಳೇಭಾವಿ, ಬಿ. ಸಾಲವಾಡಗಿ, ಮತ್ತಿತರ ಗ್ರಾಮಗಳು ಒಳಗೊಂಡು ಮಾಳನೂರ ಕುಡಿಯುವ ನೀರಿನ ಘಟಕ್ಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ತಾಳಿಕೋಟೆ ಪಟ್ಟಣ ಸೇರಿದಂತೆ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಣೆ ಹಾಗೂ ಭವಿಷ್ಯದಲ್ಲಿ ಉತ್ತಮ ವಿದ್ಯುತ್ ಪೂರೈಕೆ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಹೆಸ್ಕಾಂ ತಿಳಿಸಿದೆ.
ಹೀಗಾಗಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸೆ.೧೩ರಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಸಹಕರಿಸುವಂತೆ ತಾಳಿಕೋಟೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ ಹಾದಿಮನಿ ಮನವಿ ಮಾಡಿದ್ದಾರೆ.

