Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಪೀಡಿತ ತಾಲೂಕು ಘೋಷಣೆ ಶೇ.೧೦೦ ಖಚಿತ
(ರಾಜ್ಯ ) ಜಿಲ್ಲೆ

ಬರಪೀಡಿತ ತಾಲೂಕು ಘೋಷಣೆ ಶೇ.೧೦೦ ಖಚಿತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ | ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರ ಬಗ್ಗೆ ಕಿವಿಗೊಡಬೇಡಿ | ಶಾಸಕ ನಾಡಗೌಡ ಭರವಸೆ

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ-ತಾಳಿಕೋಟೆ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸಮಗ್ರ ಮಾಹಿತಿ ಹಾಗೂ ಅಂಕಿ-ಅಂಶಗಳನ್ನು ನೀಡಲಾಗಿದೆ. ಮುದ್ದೇಬಿಹಾಳ-ತಾಳಿಕೋಟೆ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಕುರಿತು ಮುಖ್ಯಮಂತ್ರಿಗಳು ನೂರಕ್ಕೆ ನೂರು ಭರವಸೆ ನೀಡಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಿಂದ ಪತ್ರಿಕೆಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಮುದ್ದೇಬಿಹಾಳ-ತಾಳಿಕೋಟೆ ತಾಲೂಕಿನ ಮಳೆ ಕೊರತೆ, ಕೃಷಿ ಪರಿಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರವಾಗಿ ಮನವರಿಕೆ ಮಾಡಿಕೊಡಲಾಗಿದೆ. ಈಗಾಗಲೇ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಮುದ್ದೇಬಿಹಾಳ-ತಾಳಿಕೋಟೆ ತಾಲೂಕು ಸೇರ್ಪಡೆಯಾಗುವ ಸಾಧ್ಯತೆ ಇದ್ದರೂ, ತಾಲೂಕಿನ ವಾಸ್ತವ ಪರಿಸ್ಥಿತಿಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಸರ್ಕಾರದ ಮುಂದೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಸಂಬಂಧಪಟ್ಟ ಆಯುಕ್ತರೊಂದಿಗೆ ಮಾತನಾಡಿದ್ದು, ತಕ್ಷಣವೇ ಪರಿಸ್ಥಿತಿಯ ಕುರಿತು ಪರಿಶೀಲಿಸಿ ವರದಿ ತರಿಸಿ ನೀಡುವಂತೆ ಸೂಚಿಸಿದ್ದಾರೆ ಎಂದು ಶಾಸಕ ನಾಡಗೌಡ ವಿವರಿಸಿದರು.
ರೈತರ ಹಿತದೃಷ್ಟಿಯಿಂದ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಲಾಗಿದ್ದು, ಮುದ್ದೇಬಿಹಾಳ-ತಾಳಿಕೋಟೆ ತಾಲೂಕು ಬರಪೀಡಿತ ಪಟ್ಟಿಗೆ ಸೇರುತ್ತದೆ ಎಂಬ ಬಗ್ಗೆ ಯಾವುದೇ ಅನುಮಾನ ಬೇಡ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ನೂರಕ್ಕೆ ನೂರು ಭರವಸೆ ನೀಡಿದ್ದಾರೆ. ಇನ್ನೂ ಸುಮಾರು ೫೦-೬೦ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವ ಸಾಧ್ಯತೆ ಇದ್ದು, ಅದರಲ್ಲಿ ಮುದ್ದೇಬಿಹಾಳ-ತಾಳಿಕೋಟೆ ತಾಲೂಕು ಖಂಡಿತವಾಗಿ ಸೇರ್ಪಡೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುದ್ದೇಬಿಹಾಳ ಬಂದ್ ಮಾಡುವ ಅಗತ್ಯವಿಲ್ಲ

  ಬರ ಘೋಷಣೆಗಾಗಿ ರೈತರು ಪ್ರತಿಭಟನೆ, ಮುಷ್ಕರ ಅಥವಾ ಬಂದ್‌ಗಳಂತಹ ಹೋರಾಟಗಳನ್ನು ನಡೆಸುವ ಅಗತ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ವರದಿ ಆಧಾರದ ಮೇಲೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಮುದ್ದೇಬಿಹಾಳ ಬಂದ್ ಮಾಡುವದು ಅಗತ್ಯವಿಲ್ಲಾ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ರೈತರ ಹೆಸರಿನಲ್ಲಿ ರಾಜಕೀಯ ಮಾಡಬೇಡಿ

  ತಾಲೂಕಿನಲ್ಲಿ ಕೆಲವರು ರೈತರ ಹೆಸರಿನಲ್ಲಿ ಹಸಿರು ಶಾಲು ಧರಿಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವ ಷಡ್ಯಂತ್ರ ನಡೆಸುತ್ತಿದ್ದಾರೆ. ಇಂತಹವರ ಮಾತಿಗೆ ರೈತರು ಕಿವಿಗೊಡಬಾರದು ಎಂದು ನಾಡಗೌಡ ಹೇಳಿದರು.
   ರೈತ ನಾಯಕ ಎಂಬ ಸ್ವಯಂಘೋಷಿತ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕೆಲವರು ತಮ್ಮ ವೈಯಕ್ತಿಕ ಸಂಕಷ್ಟಗಳಿಗೆ ರೈತರ ಹೆಸರನ್ನು ಬಳಸಿಕೊಂಡು ಪರಿಹಾರ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಈ ಹಿಂದೆ ಸಾಕಷ್ಟು ಉದಾಹರಣೆಗಳಿವೆ. ಹೀಗಾಗಿ ರೈತರ ಹಿತದ ಹೆಸರಿನಲ್ಲಿ ನಡೆಯುವ ರಾಜಕೀಯ ಹೋರಾಟಗಳನ್ನು ರೈತರು ಎಚ್ಚರಿಕೆಯಿಂದ ಗಮನಿಸಬೇಕು ಎಂದು ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
    In (ರಾಜ್ಯ ) ಜಿಲ್ಲೆ
  • ನಿನ್ನೆ ಡಾಂಬರ್, ಇಂದು ಗುಂಡಿ: ಕಲ್ಯಾಣ ಪಥ್‌ಗೆ ಒಂದೇ ದಿನದ ‘ಕಲ್ಯಾಣ’!
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.