Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
(ರಾಜ್ಯ ) ಜಿಲ್ಲೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಥಣಿಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಚಿವ ಲಕ್ಷ್ಮಣ ಸವದಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಮಾಲೀಕರು ಜನರ ತೆರಿಗೆ ಹಣದಿಂದ ವೇತನ ಪಡೆಯುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಸೇವಕರಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಪಟ್ಟಣದ ಖೋತ ಸಭಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಯಾವ ಅಧಿಕಾರಿಯ ಕಚೇರಿ ಎಲ್ಲಿದೆಯೊ ಆ ಕೇಂದ್ರ ಸ್ಥಾನದಲ್ಲೇ ಅವರು ಕಡ್ಡಾಯವಾಗಿ ವಾಸ್ತವ್ಯ ಮಾಡಬೇಕು ವಾಸ್ತವ್ಯಕ್ಕೆ ಸಂಬಂಧಿಸಿದಂತೆ ಮನೆ ಬಾಡಿಗೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಮೇಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ನಡೆಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಗೂ ಸ್ವೀಕೃತಿ ನೀಡಬೇಕು. ಅರ್ಜಿಯಲ್ಲಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ತಕ್ಷಣವೇ ಪರಿಹರಿಸಬೇಕು. ಕಾನೂನಿನ ವ್ಯಾಪ್ತಿಗೆ ಬಾರದ ಅರ್ಜಿಗಳಿಗೆ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಾಂಗ ಮತ್ತು ಶಾಸಕಾಂಗ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಆಡಳಿತ ಪರಿಣಾಮಕಾರಿಯಾಗಲು ಸಾಧ್ಯ ಬಡವರು, ದುರ್ಬಲರು ಹಾಗೂ ಹಣ, ಜನಬಲ ಅಥವಾ ಪ್ರಭಾವ ಇಲ್ಲದವರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.
ಇಂದು ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ತಕ್ಷಣವೇ ಕಳುಹಿಸಿ ಪರಿಹಾರ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ, ತಾಲೂಕಾ ದಂಡಾಧಿಕಾರಿ ಸಿದರಾಯ ಭೋಸಗಿ, ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಿದ್ಧಾರ್ಥ ಸಿಂಗೆ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.