Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ

ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ

ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ಮಾನವ ಕುಲಕ್ಕೆ ಆದರ್ಶ :ಸಚಿವ ಜಾರಕಿಹೊಳಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ಮಾನವ ಕುಲಕ್ಕೆ ಆದರ್ಶ :ಸಚಿವ ಜಾರಕಿಹೊಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಮತಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ ಇಡೀ ಮಾನವ ಕುಲಕ್ಕೆ ಸೀಮಿತವಾದ ಸಂವಿಧಾನ ಸಾಮಾಜಿಕ, ರಾಜಕೀಯ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.
ವಿಶ್ವಕಂಡ ಅಪರೂಪದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿದೆ. ಪ್ರತಿಮೆ ಅನಾವರಣಕ್ಕೆ ಮಾತ್ರ ಸೀಮೀತವಾಗದೇ ಅವರ ಹೋರಾಟ, ತ್ಯಾಗ ಪ್ರತಿದಿನ ಸ್ಮರಣೆಯಾಗಬೇಕು. ಅವರು ನೀಡಿದ ಸಂವಿಧಾನದ ಕೊಡುಗೆ ಅಪಾರವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ತ್ಯಾಗ ನಮಗೆ ಸ್ಪೂರ್ತಿದಾಯಕ ಹಾಗೂ ಅವರ ಆದರ್ಶಗಳು ನಮಗೆ ದಾರಿದೀಪವಾಗಿವೆ ಎಂದು ಹೇಳಿದರು.
ಕಳೆದ ಬಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಸಂದರ್ಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಈ ಭಾಗದಲ್ಲಿ ರಸ್ತೆ, ವಸತಿ ಶಾಲೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಇನ್ನೂ ಸಹ ಈ ಭಾಗದಲ್ಲಿ ಅಭಿವೃದ್ದಿ ಕೆಲಸಗಳು ಆಗಬೇಕಾಗಿದೆ. ಆರ್ಥಿಕ-ಸ್ಥಿತಿಗತಿಗಳನ್ನು ನೋಡಿಕೊಂಡು ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂಪೂರ್ಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಅಭಿವೃದ್ದಿ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆಯಿಲ್ಲ. ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು, ಈ ಯೋಜನೆಗಳಿಂದ ಯಾವುದೇ ಅಭಿವೃದ್ದಿ ಕಾಮಗಾರಿಗಳು ಕುಂಠಿತವಾಗಿಲ್ಲ ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ವಿಜಯಪುರ ಜಿಲ್ಲೆ ಐತಿಹಾಸಿಕ ಚರಿತ್ರೆವುಳ್ಳ ಜಿಲ್ಲೆಯಾಗಿದೆ. ೧೨ನೇ ಶತಮಾನದ ಬಸವಾದಿ ಶರಣರು ಕಾಯಕ ತತ್ವವನ್ನು ಅಳವಡಿಸಿಕೊಂಡು ಬಂದಿದ್ದು, ಅಸಮಾನತೆಯನ್ನು ತೊಡೆದು ಹಾಕಿ ಸಮಾನತೆಯ ಸಮಾಜ ನಿರ್ಮಾಣ ಮಾಡಿ ಸಂವಿಧಾನದ ಆಶಯದಂತೆ ಸಮಾನ ಸಮಾಜಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತ, ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಜನಪರ ಯೋಜನೆಗಳಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಿವೆ. ಸ್ವತಂತ್ರವಾಗಿ ಬದಕುಲು ಹಾಗೂ ಸ್ವಾಭಿಮಾನ ಬದುಕು ಕಟ್ಟಿಕೊಡಲು ಅವಕಾಶ ಕಲ್ಪಿಸಿದೆ. ಈ ಯೋಜನೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಆಸರೆ ದೊರೆತಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಅವರು ಹೇಳಿದರು.
ನಾಗಪುರದ ನಾಗಬೋಧಿಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ನಾಗಠಾಣ ಶಾಸಕರಾದ ವಿಠಲ್ ಕಟಕಧೊಂಡ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಇಂಡಿ ತಹಶೀಲ್ದಾರರಾದ ವಿಜಯಕುಮಾರ ಕಡಕಬಾವಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS congress public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ

ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ

ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ

ನಿಷ್ಠಾವಂತ ಶರಣ ಹಡಪದ ಅಪ್ಪಣ್ಣ :ನಾಯಕಲಮಠ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂತನ ಪಿಎಸೈ ಮಂಜುನಾಥ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಸಿಎಂ ಪಾಲಿಕೆ ನೌಕರರ ಕಷ್ಟ ಕೇಳಲಿ :ಎಚ್ಡಿಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಒತ್ತುವರಿ ಮಾಡಿದ ಅಂಗಡಿಗಳ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ನಿಷ್ಠಾವಂತ ಶರಣ ಹಡಪದ ಅಪ್ಪಣ್ಣ :ನಾಯಕಲಮಠ
    In (ರಾಜ್ಯ ) ಜಿಲ್ಲೆ
  • ಗ್ರಾ.ಪಂ ಸದಸ್ಯನಿಂದ ದಿಢೀರ್ ಏಕಾಂಗಿ ಧರಣಿ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಬಾಗಿನ ಅರ್ಪಿಸಿದ ರೈತರು
    In (ರಾಜ್ಯ ) ಜಿಲ್ಲೆ
  • ಶಾಂತಿ-ಸುವ್ಯವಸ್ಥೆ ಕಾಪಾಡಲು ಜನರ ಸಹಕಾರ ಮುಖ್ಯ :ಪಿಐ ದಾಶ್ಯಾಳ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ದಿಗೆ ಪೂರಕ ವರದಿ ಶಿಫಾರಸ್ಸು :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.