ವಿಜಯಪುರ: ಜಿಲ್ಲಾಡಳಿತ, ವಿಜಯಪುರ ವತಿಯಿಂದ ನವೆಂಬರ್ ೦೧ ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೭ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದವರೆಗೆ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ ೯ ಗಂಟೆಗೆ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಲಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ ಬಸನಗೌಡ ಪಾಟೀಲ, ಅಶೋಕ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳ ವಿವರ : ನವೆಂಬರ್ ೧ರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂದು ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನಂತರ ರಾಷ್ಟçಗೀತೆ, ನಾಡಗೀತೆ, ಪಥಸಂಚಲನಾ ತಂಡಗಳ ವೀಕ್ಷಣೆ, ಗೌರವ ವಂದನೆ, ಕರ್ನಾಟಕ ರಾಜ್ಯೋತ್ಸವ ಸಂದೇಶ, ಕರ್ನಾಟಕ ಸಂಭ್ರಮ ೫೦ರ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ ೫ ಕನ್ನಡ ಗೀತೆಗಳನ್ನು ಹಾಡುವ ಮೂಲಕ ನಮನ, ಪಥಸಂಚಲನಗಳ ನಿರ್ಗಮನ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
Related Posts
Add A Comment