ಉದಯರಶ್ಮಿ ದಿನಪತ್ರಿಕೆ
ಇಂಡಿ: ಸನ್ ೨೦೨೪-೨೫ ನೇ ಸಾಲಿನ ಉತ್ತಮ ಕಾರ್ಯ ನಿರ್ವಹಣೆಗಾಗಿ ತಾಲೂಕಿನ ಅಹಿರಸಂಗ ಗ್ರಾಮದ ಭೂದೇವಿ ಕಬ್ಬು ಬೆಳೆಯುವವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ೧೦ ಸಾವಿರ ನಗದು ಸಹಿತ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.
ವಿಜಯಪುರದ ಬಿಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಹಾಗೂ ವ್ಯವಸ್ಥಾಪಕ ರಮೇಶ ಬಿರಾದಾರ ಅವರಿಗೆ ಪ್ರಶಸ್ತಿ ಪತ್ರ ಪ್ರಧಾನ ನಡೆಯಿತು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಚಿವ ಶಿವಾನಂದ ಪಾಟೀಲ, ಬ್ಯಂಕ್ ಉಪಧ್ಯಕ್ಷ ರಾಜಶೇಖರ ಗುಡದಿನ್ನಿ ಸೇರಿದಂತೆ ಬಿಡಿಸಿಸಿಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

