Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
(ರಾಜ್ಯ ) ಜಿಲ್ಲೆ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾನವ ಹಕ್ಕುಗಳ ಜಾಗೃತಿ ಸಮಾವೇಶ | ಸಾಧಕರಿಗೆ ಪ್ರಶಸ್ತಿ ಪ್ರದಾನ | ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಮಾನವ ಹಕ್ಕುಗಳು ಕೇವಲ ಕಾನೂನು ಪುಸ್ತಕಗಳಲ್ಲಿರುವ ಪದಗಳಲ್ಲ. ಜಾತಿ, ಧರ್ಮ, ಲಿಂಗ, ಆರ್ಥಿಕ ಸ್ಥಿತಿ ಸೇರಿದಂತೆ ಯಾವುದೇ ಭೇದವಿಲ್ಲದೆ ಪ್ರತಿಯೊಬ್ಬ ಮನುಷ್ಯನಿಗೂ ಗೌರವದಿಂದ ಬದುಕುವ ಹಕ್ಕಿದೆ. ಈ ಹಕ್ಕುಗಳ ಉಲ್ಲಂಘನೆಯಾದಾಗ ಮೌನವಾಗಿರುವುದಕ್ಕಿಂತ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ಧ್ವನಿ ಎತ್ತುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ ಕರೆ ನೀಡಿದರು.
ಪಟ್ಟಣದ ಖಾಸಗಿ ಹೋಟಲ್ ನ ಫಂಕ್ಷನ್ ಹಾಲ್ ನಲ್ಲಿ ಯೂತ್ ಫಾರ್ ಹ್ಯೂಮನ್ ರೈಟ್ಸ್ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾನವ ಹಕ್ಕುಗಳ ಜಾಗೃತಿ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತÀನಾಡಿದರು.
ಹಕ್ಕುಗಳನ್ನು ಕೇಳುವ ಧೈರ್ಯಕ್ಕೂ ಮೊದಲು, ಅವುಗಳ ಬಗ್ಗೆ ಅರಿವು ಇರಬೇಕು. ತನ್ನ ಹಕ್ಕುಗಳ ಅರಿವು ಹೊಂದಿದ ವ್ಯಕ್ತಿ ಮಾತ್ರ ಅನ್ಯಾಯದ ವಿರುದ್ಧ ಕಾನೂನುಬದ್ಧವಾಗಿ ಹೋರಾಡಲು ಸಾಧ್ಯ. ಸಮಾಜದಲ್ಲಿ ನಡೆಯುವ ಅನ್ಯಾಯ, ಶೋಷಣೆ, ತಾರತಮ್ಯ ಹಾಗೂ ದೌರ್ಜನ್ಯಗಳ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಭಾಗದ ಜನರಿಗೂ ತಮ್ಮ ಕಾನೂನುಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರತಿಭಂಧಕ ಮೇಲುಸ್ತುವಾರಿ ಸಮಿತಿಯ ಸದಸ್ಯ ಅಭಿಷೇಕ ಚಕ್ರವರ್ತಿ ಮಾತನಾಡಿ, ಅಧಿಕಾರವಿದೆ ಎಂಬ ಕಾರಣಕ್ಕೆ ಸಾಮಾನ್ಯ ನಾಗರಿಕನ ಹಕ್ಕುಗಳನ್ನು ತುಳಿಯಲು ಸಾಧ್ಯವಿಲ್ಲ. ಹಣವಿದೆ ಎಂಬ ಕಾರಣಕ್ಕೆ ಬಡವನ ಧ್ವನಿಯನ್ನು ಅಡಗಿಸೋಕೆ ಸಾಧ್ಯವಿಲ್ಲ. ಹಕ್ಕುಗಳ ಬಗ್ಗೆ ಮಾತನಾಡುವಾಗ ಕರ್ತವ್ಯಗಳನ್ನೂ ಮರೆಯಬಾರದು. ನಮ್ಮ ಹಕ್ಕು ಇನ್ನೊಬ್ಬರ ಹಕ್ಕಿಗೆ ಧಕ್ಕೆ ತರಬಾರದು. ಪರಸ್ಪರ ಗೌರವ, ಸಮಾನತೆ ಮತ್ತು ಸಹಬಾಳ್ವೆಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಯೂಫಾಹ್ಯೂರೈ ನ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ರಾಜು ಮಾತನಾಡಿ, ಸ್ವಾತಂತ್ರ‍್ಯಕ್ಕೂ ಮೊದಲು ನಾವು ವಿದೇಶಿಯರ ವಿರುದ್ಧ ಹೋರಾಟ ಮಾಡಿದ್ದೆವು. ದೇಶ ಸ್ವತಂತ್ರವಾದ ನಂತರ ನಮ್ಮ ಹಕ್ಕುಗಳು, ಸ್ವಾತಂತ್ರ‍್ಯ ಮತ್ತು ಗೌರವವನ್ನು ಕಾಪಾಡಿಕೊಂಡು ಬದುಕಬಹುದು ಎಂಬ ಆಶಯವಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವವರು ನಮ್ಮ ಸುತ್ತಮುತ್ತಲಿನವರೇ ಆಗಿರುವುದು ದುರಂತದ ಸಂಗತಿ. ಪ್ರತಿದಿನ ಒಂದಲ್ಲ ಒಂದು ಕ್ಷೇತ್ರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಲೇ ಇದೆ. ಬಡವನ ಹಕ್ಕು, ಮಹಿಳೆಯರ ಹಕ್ಕು, ಮಕ್ಕಳ ಹಕ್ಕು, ಕಾರ್ಮಿಕರ ಹಕ್ಕು, ದುರ್ಬಲ ವರ್ಗಗಳ ಹಕ್ಕು ಹೀಗೆ ಎಲ್ಲೆಡೆ ಯಾವುದೋ ರೂಪದಲ್ಲಿ ಉಲ್ಲಂಘನೆ ಕಾಣಿಸುತ್ತಿದೆ. ಇಂತಹ ಪ್ರಸಂಗಗಳು ಎದುರುದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು ಎಂದರು.
ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ದ ದಕ್ಷಿಣ ಭಾರತದ ಪ್ರ.ಕಾರ್ಯದರ್ಶಿ ಎ.ಬಿ.ಹೊಸಮನಿ, ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಉಪಾಧ್ಯಕ್ಷ ಪುಟ್ಟರಂಗಯ್ಯ ಎನ್, ಸಮಾಜ ಸೇವಕ ಅಯ್ಯಪ್ಪ ದೊಡಮನಿ ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ೭೫ ಸಾಧಕರಿಗೆ ಹಸಿರು ಉಸಿರು, ಸಮಾಜ ರತ್ನ, ವೀರ ರತ್ನ, ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘಟನೆಯ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳಿಗೆ ಐಡಿ ಕಾರ್ಡ ವಿತರಿಸಲಾಯಿತು. ಇದೇ ವೇಳೆ ಸಿದ್ದಣ್ಣ ಚಲವಾದಿ ರಚಿತ ಹುಟ್ಟು ಸಾವು ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಹಿರಿಯ ಸಾಹಿತಿ ಶಿವಪುತ್ರ ಅಜಮನಿ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಎ.ಆರ್.ಮುಲ್ಲಾ, ಜಂಟಿ ಕಾರ್ಯದರ್ಶಿ ಎಸ್.ಕೆ.ಘಾಟಿ, ಕಲಾವಿದ ಎಂ.ಪಿ.ವಾಳದವರ, ದ್ಯಾಮಣ್ಣ ಚಲವಾದಿ, ಪ್ರಮುಖರಾದ ಮುತ್ತು ಹಿರೇಮಠ, ಶ್ರವಣಕುಮಾರ ಪೂಜಾರಿ, ಪವಾಡೆಪ್ಪ ಮಾದರ, ಶರಣಪ್ಪ ಮಾದಶೆಟ್ಟಿ, ಶಿವಪುತ್ರ ವಡ್ಡರ, ಹಣಮಂತ ಹಾದಿಮನಿ, ಸುಶ್ಮಿತಾ ಬಳ್ಳಾರಿ, ಶಾಂತಮ್ಮ ಕೊಂಡಗೂಳಿ, ಶಕುಂತಲಾ ಪೂಜಾರಿ, ಸೋಮು ಗಸ್ತಿಗಾರ ಭಾಗಿಯಾಗಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಧಾನಿ ವಾಲಿಕಾರ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಎಸ್.ಎಸ್.ಮಠ ಮತ್ತು ಮುತ್ತು ತೋಟಿಹಾಳ ನಿರ್ವಹಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.