ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಪಂಜುರ್ಲಿ ಫಂಕ್ಷನ್ ಹಾಲ್ ನಲ್ಲಿ ನಡೆದ ಮಾನವ ಹಕ್ಕುಗಳ ಜಾಗೃತಿ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನ್ಯಾಯವಾದಿ ಹಾಗೂ ಪತ್ರಕರ್ತ ಚೇತನ.ಮ.ಶಿವಶಿಂಪಿ ಅವರಿಗೆ ರಾಜ್ಯ ಯೂತ್ ಫಾರ್ ಹ್ಯೂಮನ್ ರೈಟ್ಸ್ ವತಿಯಿಂದ ಕೊಡಮಾಡುವ ವೀರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ, ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ರಾಜು, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಭಾರತದ ಪ್ರ. ಕಾರ್ಯದರ್ಶಿ ಎ.ಬಿ.ಹೊಸಮನಿ, ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರತಿಭಂಧಕ ಮೇಲುಸ್ತುವಾರಿ ಸಮಿತಿಯ ಸದಸ್ಯ ಅಭಿಷೇಕ ಚಕ್ರವರ್ತಿ, ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಉಪಾಧ್ಯಕ್ಷ ಪುಟ್ಟರಂಗಯ್ಯ ಎನ್, ಸಮಾಜ ಸೇವಕ ಅಯ್ಯಪ್ಪ ದೊಡಮನಿ ಸೇರಿದಂತೆ ಹಲವರು ಇದ್ದರು.

