ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ೨೦೨೬-೨೭ನೇ ಸಾಲಿನಲ್ಲಿ ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರ ಹಾಗೂ ಬಡಿಗೆತನ ಕಿಟ್‌ಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ವಿಜಯಪುರ ಜಿಲ್ಲಾಡಳಿತದ ಅಧಿಕೃತ ಜಾಲತಾಣ ಗಿiರಿಚಿಥಿಚಿಠಿuಡಿಚಿ.ಟಿiಛಿ.iಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರ ಪತ್ರವನ್ನು ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಂಡು, ಪಿಡಿಒ ಅವರ ಸಹಿ ಪಡೆದು ನಂತರ ಅರ್ಜಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ.
ಅ.೧೫ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಲಾಗಿದೆ.
